ಮಂಡ್ಯ: ಜಿಲ್ಲೆಯಲ್ಲಿ ಹೆಮ್ಮಾರಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಸಾವನ್ನಪ್ಪುವವರ ಸಂಖ್ಯೆಯೂ ಜಾಸ್ತಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜನ ಗುಂಪು ಸೇರುವುದು, ಪ್ರತಿಭಟನೆ, ಸಭೆ ಸಮಾರಂಭ ನಡೆಸುವುದನ್ನು ತಡೆಯಲು ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ.
ಆದರೆ, ಮಂಡ್ಯದಲ್ಲಿ ನಿಷೇಧಾಜ್ಞೆ ಆದೇಶ ಜಾರಿಯಲ್ಲಿದ್ದಾಗಲೇ ನಿಯಮ ಉಲ್ಲಂಘಿಸಿದ್ರೂ ಡೋಂಟ್ ಕೇರ್ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾಧಿಕಾರಿ ಆದೇಶ ಜಾರಿ ಮಾಡಿದ ಮರು ದಿನವೇ ಬೃಹತ್ ಪ್ರತಿಭಟನೆ ಮಾಡಿದ್ದರೂ ಯಾರೂ ಕೇಳೋರೆ ಇರಲಿಲ್ಲ. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅನುಮತಿ ನೀಡುವಂತೆ ಆಗ್ರಹಿಸಿ ಲಾರಿ ಲಾರಿಗಳಲ್ಲೇ 500ಕ್ಕೂ ಹೆಚ್ಚು ಮಂದಿ ಆಗಮಿಸಿ
ಗುಂಪು ಗುಂಪಾಗಿ ಸೇರಿ, ಸಾಮಾಜಿಕ ಅಂತರ ಮರೆತು ಪ್ರತಿಭಟನೆ ನಡೆಸಿದ್ದರೂ ಯಾರೂ ಕೇಳುವವರೇ ಇಲ್ಲದಂತಾಗಿದೆ.
ಬೋವಿ ಜನಾಂಗದವರು, ಕಾರ್ಮಿಕರು ಡಿಸಿ ಕಚೇರಿ ಹಿಂಭಾಗವೇ ಪ್ರತಿಭಟನೆ ನಡೆಸಿದರೂ ಪೆÇಲೀಸರು ಕ್ಯಾರೇ ಎಂದಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Teamindia- 2026: 💥 ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨
💥 * ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨 * ಟೀಮ್ ಇಂಡಿಯಾದ ಭವಿಷ್ಯವನ್ನು ಹಾಳು ಮಾಡುತ್ತಿರುವ ಸ್ಯಾಡಿಸ್ಟ್‍ಗಳು ಯಾರು..? 👿...








