ಚಾಮರಾಜನಗರ ಆಕ್ಸಿಜನ್ ದುರಂತ : ಭಾವುಕರಾದ ರೋಹಿಣಿ ಸಿಂಧೂರಿ

1 min read

ಚಾಮರಾಜನಗರ ಆಕ್ಸಿಜನ್ ದುರಂತ : ರೋಹಿಣಿ ಸಿಂಧೂರಿ ಭಾವುಕ

ಮೈಸೂರು: ಚಾಮರಾಜನಗರದಲ್ಲಿ ಕೋವಿಡ್ ಸೋಂಕಿತರ ಸರಣಿ ಸಾವುಗಳ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಪ್ರತಿಕ್ರಿಯೆ ನೀಡುತ್ತಾ ಅವರು, ಚಾಮರಾಜನಗರದಲ್ಲಿ ಆಗಿರುವುದಕ್ಕೆ ನೋವಿದೆ. ಸಾಕಷ್ಟು ಊಹಾಪೆಪೋಹಗಳು ನಡೆಯುತ್ತಿವೆ. ಇದರಿಂದ ನನಗೆ ತುಂಬಾ ನೋವಾಗಿದೆ. ನನ್ನ 10 ವರ್ಷದ ಸೇವೆಯಲ್ಲಿ ನಾನು ಎಂದು ಈ ರೀತಿ ಕೆಲಸ ಮಾಡಿಲ್ಲ ಎಂದು ತಮ್ಮ ಮೇಲಿನ ಆರೋಪಗಳು ಕುರಿತು ಸ್ಪಷ್ಟೀಕರ ನೀಡಿದ್ದಾರೆ.

ಇನ್ನು ದೇಶದ ಯಾವುದೇ ಮೂಲೆಯಲ್ಲಿ ಆದ ಸಾವು ಸಾವೇ, ಸತ್ತವರ ಮನೆಯಲ್ಲಿ ನೋವಿರುತ್ತದೆ ಈ ವೇಳೆ ಈ ರೀತಿ ಆರೋಪ ಮಾಡಬಾರದು. ಮಾಡಿದರೆ ನಮ್ಮ ಮೇಲೆ ತಪ್ಪು ಅಭಿಪ್ರಾಯ ಬರುತ್ತದೆ. ಅವರು ಮಾಧ್ಯಮದಲ್ಲಿ ಹೇಳಿಕೆ ನೀಡದಿದ್ದರೆ ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ಅವರು ಅಸತ್ಯವಾದ ವಿಚಾರಗಳನ್ನು ಹೇಳಿದ್ದಾರೆ, ಅದಕ್ಕೆ ಸ್ಪಷ್ಟಿಕರ ನೀಡುತ್ತಿದ್ದೇನೆ. ತನಿಖೆಯಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದರು.

rohini-sindoori

ಇನ್ನು ಚಾಮರಾಜನಗರಕ್ಕೆ ಸ್ಪಂದಿಸಿಲ್ಲ ಅನ್ನೋದು ಸತ್ಯಕ್ಕೆ ದೂರವಾದ ಮಾತು. ಅವರ ಕಷ್ಟ ಕಾಲದಲ್ಲಿ ರಿಸ್ಕ್ ತೆಗೆದುಕೊಂಡು ಆಕ್ಸಿಜನ್ ಕಳುಹಿಸಿದ್ದೇವೆ. ಅದು ನಾವು ಆಸ್ಪತ್ರೆಯಲ್ಲಿದ್ದ 40 ಸಿಲಿಂಡರ್ ಕಳುಹಿಸಿದ್ದೇವೆ. ಎಲ್ಲೂ ಸಹಾ ಆಸ್ಪತ್ರೆಯಿಂದ ಕಳುಹಿಸಿ ರಿಸ್ಕ್ ತೆಗೆದುಕೊಳ್ಳುವುದಿಲ್ಲ. ಇದು ಮಾನವೀಯತರ ಅಲ್ಪವಾ ಎಂದು ಚಾಮರಾಜನಗರ ಡಿಸಿ ಎಂ ಆರ್ ರವಿಗೆ ರೋಹಿಣಿ ಸಿಂಧೂರಿ ಪ್ರಶ್ನೆ ಮಾಡಿದರು.

ಅವರು ಸರಿಯಾಗಿ ನಿರ್ವಹಣೆ ಮಾಡದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಈ ರೀತಿ ಆಗಿದ್ದರೆ ಯಾರನ್ನಾದರೂ ಹೇಗಾದರೂ ಸಂಪರ್ಕಿಸಿ ಆಕ್ಸಿಜನ್ ಪಡೆಯುತ್ತಿದ್ದೆವು. ಅವರು ಆ ಕೆಲಸ ಮಾಡಿಲ್ಲ. ನಾವು ಜನರ ಪ್ರಾಣ ಉಳಿಸಲು 24/7ಕೆಲಸ ಮಾಡುತ್ತಿದ್ದೇವೆ. ಈ ರೀತಿ ಹೇಳಿದರೆ ನಮಗೂ ನೋವಾಗುತ್ತದೆ ಎಂದು ಭಾವುಕರಾದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd