DC vs LSG Match | ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್ ಆಯ್ಕೆ
ಐಪಿಎಲ್ ನ 45ನೇ ಪಂದ್ಯದಲ್ಲಿ ಬಲಿಷ್ಟ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಲಕ್ನೋ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯಕ್ಕಾಗಿ ಎರಡು ತಂಡಗಳ ತಮ್ಮದೇ ರಣತಂತ್ರ ರೂಪಿಸಿಕೊಂಡು ಸಜ್ಜಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಲಕ್ನೋ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಆವೇಶ್ ಖಾನ್ ಬದಲಾಗಿ ಕನ್ನಡಿಗ ಕೃಷ್ಣಪ್ಪ ಗೌತಮ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಯಾವುದೇ ಬದಲಾವಣೆ ಇಲ್ಲದೇ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ.
ಉಭಯ ತಂಡಗಳು:
ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿಕಾಕ್, ಕೆ.ಎಲ್.ರಾಹುಲ್(ನಾಯಕ), ಕೃಷ್ಣಪ್ಪ ಗೌತಮ್, ದೀಪಕ್ ಹೂಡ, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟಾಯ್ನಿಸ್, ಆಯುಷ್ ಬಡೋನಿ, ಜೇಸನ್ ಹೋಲ್ಡರ್, ದುಶ್ಮಂತ ಚಮೀರ, ಮೊಸಿನ್ ಖಾನ್, ರವಿ ಬಿಷ್ಣೋಯಿ.
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಬ್ ಪಂತ್(ನಾಯಕ), ಲಲಿತ್ ಯಾದವ್, ರೊವ್ಮನ್ ಪೋವೆಲ್, ಅಕ್ಸರ್ ಪಟೇಲ್, ಶಾರ್ದೂಲ್ ಥಾಕೂರ್, ಕುಲ್ದೀಪ್ ಯಾದವ್, ಮುಸ್ತಫಿಜುರ್ ರಹಮಾನ್, ಚೇತನ್ ಸಕಾರಿಯಾ.
ಈ ಎರಡೂ ತಂಡಗಳು ಈ ಸೀಸನ್ ನಲ್ಲಿ ಎರಡನೇ ಬಾರಿ ಮುಖಾಮುಖಿಯಾಗುತ್ತಿವೆ.
ಮೊದಲ ಸೆಣಸಾಟದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಆರು ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು. ಹೀಗಾಗಿ ಡೆಲ್ಲಿಗೆ ಇದು ಸೇಡಿನ ಸಮರವಾಗಿದೆ.
dc-vs-lsg-match-Lucknow Super Giants opt to bat