DC vs PBKS match | ಹೆಡ್ ಟು ಹೆಡ್ ರೆಕಾರ್ಡ್ ಹೇಗಿದೆ..?
15ನೇ ಸೀಸನ್ ನ ಇಂಡಿಯನ್ ಪ್ರಿಮಿಯರ್ ಲೀಗ್ ನ 32 ನೇ ಪಂದ್ಯದಲ್ಲಿ ಮಯಾಂಕ್ ಅಗರ್ ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ ಮತ್ತು ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುಖಾಮುಖಿಯಾಗಲಿವೆ.
ಪಂಜಾಬ್ ಕಿಂಗ್ಸ್ ತಂಡ 15ನೇ ಸೀಸನ್ ನಲ್ಲಿ ಆರು ಪಂದ್ಯಗಳನ್ನು ಆಡಿದ್ದು, ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಆರು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಏಳು ವಿಕೆಟ್ ಗಳೊಂದಿಗೆ ಸೋಲು ಕಂಡಿದೆ.
ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐದು ಪಂದ್ಯಗಳನ್ನಾಡಿದ್ದು, ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ.
ಮೂರು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಸೋಲು ಕಂಡಿವೆ. ಇದರೊಂದಿಗೆ ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಲ್ಲಿ ಏಂಟನೇ ಸ್ಥಾನದಲ್ಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ 16 ರನ್ ಗಳಿಂದ ಸೋಲು ಕಂಡಿದೆ.
ಹೆಡ್ ಟು ಹೆಡ್
ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಈ 2 ತಂಡಗಳು ಈವರೆಗೂ 28 ಪಂದ್ಯದಲ್ಲಿ ಮುಖಾಮುಖಿಯಾಗಿವೆ.
ಈ ಪೈಕಿ ಉಭಯ ತಂಡಗಳು ಸಮಬಲ ಹೋರಾಟ ನಡೆಸಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ 13 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಪಂಜಾಬ್ ಕಿಂಗ್ಸ್ ತಂಡ 15 ಬಾರಿ ಜಯ ಸಾಧಿಸಿದೆ.
ಕಳೆದ ಐದು ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೇಲು ಗೈ ಸಾಧಿಸಿವೆ.
ಡೆಲ್ಲಿ ತಂಡ ನಾಲ್ಕು ಪಂದ್ಯಗಳನ್ನು ಗೆದ್ದುಕೊಂಡಿದ್ದರೇ ಪಂಜಾಬ್ ತಂಡ 1 ಪಂದ್ಯದಲ್ಲಿ ಜಯ ಸಾಧಿಸಿವೆ.
ಕಳೆದ ಸೀಸನ್ ನಲ್ಲಿ ಎರಡಕ್ಕೆ ಎರಡೂ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲುವು ಸಾಧಿಸಿದೆ.