ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮತ್ತೆ ಕಮಲ ತೆಕ್ಕೆಗೆ ಬೆಳಗಾವಿ ಡಿಸಿಸಿ ಬ್ಯಾಂಕ್; ಅಧ್ಯಕ್ಷರಾಗಿ ರಮೇಶ್ ಕತ್ತಿ ಅವಿರೊಧ ಆಯ್ಕೆ

Kariyappa N by Kariyappa N
November 14, 2020
in Newsbeat, Politics, Samagra karnataka, ರಾಜ್ಯ
dcc bank
Share on FacebookShare on TwitterShare on WhatsappShare on Telegram

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 3, 2026
ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026

ಬೆಳಗಾವಿ: ಹಲವು ದಿನಗಳಲ್ಲಿ ಕುತೂಹಲದ ಕೇಂದ್ರಬಿಂದುವಾಗಿದ್ದ ರಾಜ್ಯದ ಅತಿದೊಡ್ಡ ಸಹಕಾರಿ ಸಂಸ್ಥೆ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ರಮೇಶ್ ಕತ್ತಿ, ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಇದರೊಂದಿಗೆ ರಾಜ್ಯದ ಪ್ರತಿಷ್ಟಿತ ಸಹಕಾರ ಸಂಸ್ಥೆಯ ಅಧಿಕಾರ ಹಿಡಿಯಬೇಕೆಂಬ ಬಿಜೆಪಿಯ ಕನಸು ಕೊನೆಗೂ ಕೈಗೂಡಿದೆ. 2018ರಲ್ಲಿ ನಡೆದ ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ರಾಜ್ಯ ರಾಜಕಾರಣದ ದಿಕ್ಕನೇ ಬದಲಾಯಿಸಿತ್ತು. ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬಣ ಡಿಸಿಸಿ ಬ್ಯಾಂಕ್ ಗಾದಿ ಹಿಡಿಯವಲ್ಲಿ ಯಶಸ್ವಿಯಾಗಿತ್ತು. ಇದರೊಂದಿಗೆ ಕಾಂಗ್ರೆಸ್‍ನವರೇ ಆಗಿದ್ದ ಬೆಳಗಾವಿಯ ಸಾಹುಕಾರ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳಕರ್ ನಡುವೆ ಕಂದಕ ಏರ್ಪಟ್ಟು ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ಪತನಕ್ಕೆ ನಾಂದಿ ಹಾಡಿದ್ದು ಇತಿಹಾಸ.

ಇಬ್ಬರಿಂದ ಮಾತ್ರ ನಾಮಪತ್ರ ಸಲ್ಲಿಕೆ
ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸುಭಾಷ್ ಢವಳೇಶ್ವರ ನಾಮಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಇಬ್ಬರ ಆಯ್ಕೆ ಖಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ರಮೆಶ್ ಜಾರಕಿಹೊಳಿ, ಕತ್ತಿ ಟೀಂ ಹಾಗೂ ಲಕ್ಷ್ಮಣ ಸವದಿ ಟೀಂಗಳು ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಒಮ್ಮತಕ್ಕೆ ಬರಲು ವಿಫಲವಾಗಿದ್ದವು. ಬಿಜೆಪಿ ವರಿಷ್ಠರ ಸೂಚನೆ ಮೇರೆಗೆ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಕಳೆದ ಒಂದು ತಿಂಗಳಿಂದ ಎದ್ದಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದೆ.

bank
ಬೆಳಗಾವಿಯ ಪ್ರವಾಸಿಮಂದಿರದಲ್ಲಿ ಬೆಳಿಗ್ಗೆಯಿಂದಲೇ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಬಿಜೆಪಿ ಮುಖಂಡರು ಅಂತಿಮ ಸುತ್ತಿನ ಸಭೆ ನಡೆಸಿದರು. ಈಗಾಗಲೇ ಆಯ್ಕೆಯಾಗಿರುವ ಬ್ಯಾಂಕ್‍ನ ನಿರ್ದೇಶಕರ ಅಭಿಪ್ರಾಯಗಳನ್ನು ಆಲಿಸಿ ಅವಿರೋಧ ಆಯ್ಕೆಗೆ ನಿರ್ಧಾರ ಮಾಡಲಾಯಿತು.
ಪ್ರತಿಷ್ಠಿತ ಡಿಸಿಸಿ ಬ್ಯಾಂಕಿನ ಶತಮಾನೋತ್ಸವ ಆಚರಣೆ ಈ ವರ್ಷ ಬರಲಿದೆ. ಹೀಗಾಗಿ ಈ ಬಾರಿ ಚುನಾವಣೆ ಬೇಡ ಎನ್ನುವ ಕಾರಣಕ್ಕೆ ಎಲ್ಲರೂ ಸಮಾಲೋಚನೆ ನಡೆಸಿ ಒಮ್ಮತದ ನಿರ್ಣಯಕ್ಕೆ ಬರಬೇಕು. ಹೀಗೆಂದು ಪಕ್ಷದ ವರಿಷ್ಠರು ಅಪೇಕ್ಷೆ ವ್ಯಕ್ತಪಡಿಸಿದ್ದರು. ಜೊತೆಗೆ 14 ಹಾಲಿ ನಿರ್ದೇಶಕರನ್ನು ಮುಂದುವರಿಸುವಂತೆಯೂ ಹೇಳಿದ್ದರು. ಅವರ ಮಾತು ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದೇವೆ ಎಂದು ಉಪಮುಖ್ಯಮಂತ್ರೊ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಹಾಲಿ ಅಧ್ಯಕ್ಷ ರಮೇಶ ಕತ್ತಿ ಹಾಗೂ ಉಪಾಧ್ಯಕ್ಷ ಸುಭಾಷ ಢವಳೇಶ್ವರ ಅವರನ್ನೇ ಮುಂದುವರಿಸುತ್ತಿದ್ದೇವೆಪಕ್ಷದ ಎಲ್ಲಾ ಮುಖಂಡರೂ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಂದಾಗಿ ಹೋಗಬೇಕೆಂದು ನಿರ್ಧಾರ ಮಾಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಜಿಲ್ಲೆಯಲ್ಲಿ ಇನ್ನು ಮುಂದೆ ಉಮೇಶ್ ಕತ್ತಿ, ರಮೇಶ ಜಾರಕಿಹೊಳಿ ಹಾಗೂ ಲಕ್ಷಣ ಸವದಿ ನೇತೃತ್ವದಲ್ಲಿ ಪಕ್ಷದ ಸಂಘಟನೆ ಮಾಡುತ್ತೇವೆ. ಯಾವುದೇ ಗೊಂದಲಗಳು ಅಥವಾ ಭಿನ್ನಾಭಿಪ್ರಾಯಗಳು ನಮ್ಮಲ್ಲಿ ಇಲ್ಲ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿಪ್ರಾಯ ಹಂಚಿಕೊಳ್ಳಲು ಎಲ್ಲರಿಗೂ ಅವಕಾಶವಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಮರ್ಥಿಸಿಕೊಂಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: balgaum dcc bankBJPCongressLaxman SavadipresidentRamesh jarakiholiUmesh kattivice president election
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 3, 2026
0

ದಿನ ಭವಿಷ್ಯ: 03-04-2026 1. ಮೇಷ ರಾಶಿ (Aries) ರಾಶ್ಯಾಧಿಪತಿ ಮಂಗಳನ ಪ್ರಭಾವದಿಂದ ಇಂದು ನಿಮ್ಮಲ್ಲಿ ಅದ್ಭುತವಾದ ಶಕ್ತಿ ಮತ್ತು ಉತ್ಸಾಹ ತುಂಬಿರುತ್ತದೆ. ದಶಮ ಸ್ಥಾನದಲ್ಲಿ (ಕರ್ಮ...

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram