ಕೊವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳಿಗೂ ನೀಡಲಾಗುವುದು
ನವದೆಹಲಿ: ಭಾರತ್ ಬಯೋಟೆಕ್ನ ಕೊವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳಿಗೆ ನೀಡಲು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಒಪ್ಪಿಗೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಕಳೆದ ಡಿಸೆಂಬರ್ ತಿಂಗಳಲ್ಲಿ ಡಿಸಿಜಿಐ 12ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ತುರ್ತು ಅನುಮತಿಸಿತ್ತು. ಇದೀಗ 5 ರಿಂದ 12 ವರ್ಷದೊಳಗಿನ ಮಕ್ಕಳಿಗೂ ಲಸಿಕೆ ನೀಡಬಹುದು.
ಪುಟ್ಟ ಮಕ್ಕಳಿಗೆ ವ್ಯಾಕ್ಸಿನ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಸಚಿವ ಕೆ.ಸುಧಾಕರ್ ಸಹ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಭಾರತ್ ಬಯೋಟೆಕ್ನ ಕೊವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳಿಗೆ ನೀಡಲು ಡಿಸಿಜಿಐ ಅನುಮತಿ ನೀಡಿದೆ ಎಂದು ಅವರು ಹೇಳಿದ್ದಾರೆ.
ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ 2021ರ ಜನವರಿ 16ರಿಂದ ದೇಶಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನ ಆರಂಭಿಸಿದೆ. ಮೊದಲಿಗೆ ಆರೋಗ್ಯ ಕಾರ್ಯಕರ್ತರಿಗೆ ಈ ಲಸಿಕೆ ನೀಡಲಾಗಿತ್ತು. ತದನಂತರ ಮಾರ್ಚ್ 1ರಿಂದ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಕಾರ್ಯಾರಂಭವಾಗಿದೆ.