`ಪಕ್ಷದಲ್ಲಿ ಮೂಲ – ವಲಸಿಗರ ಗುದ್ದಾಟ’ ಇರೋದು ಒಪ್ಪಿಕೊಂಡ ಅಶ್ವಥ್
ಉಡುಪಿ : ಬೇರೆ ಪಕ್ಷದಿಂದ ಬಂದವರಿಗೆ ಸಚಿವ ಸ್ಥಾನ ನೀಡುವುದು ಮೂಲ ಬಿಜೆಪಿಗರಿಗೆ ಬೇಸರ ವಿಚಾರವಾಗಿದೆ ಎಂದು ಹೇಳುವ ಮೂಲಕ ಪಕ್ಷದಲ್ಲಿ ಮೂಲ ವಲಸಿಗರ ಗುದ್ದಾಟ ಇರೋದನ್ನ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರು ಒಪ್ಪಿಕೊಂಡಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿ, ರಾಜ್ಯದಲ್ಲಿ ಸಂಪುಟ ವಿಸ್ತರಣೆ ಸಾಕಷ್ಟು ಗಮನಸೆಳೆದಿದೆ. ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಒಂದು ಜಟಿಲ ವಿಚಾರವಾಗಿದೆ.
ಅಲ್ಪಾವಧಿಯಲ್ಲಿ ಎಲ್ಲವೂ ಗೊತ್ತಾಗಲಿದೆ. ಬೇರೆ ಪಕ್ಷದಿಂದ ಬಿಜೆಪಿಗೆ ಬಂದವರಿಗೆ ಸ್ಥಾನ ನೀಡುವುದು ಮೂಲ ಬಿಜೆಪಿಗರಿಗೆ ಬೇಸರ ವಿಚಾರವಾದರೂ ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗಬೇಕಾಗುತ್ತದೆ.
ವಲಸೆ ಬಂದವರೂ ಸರ್ಕಾರ ರಚನೆಗೆ ಕಾರಣೀಕರ್ತರಾಗಿದ್ದಾರೆ ಎಂದು ಹೇಳಿದರು. ಸಿಎಂ ನಮ್ಮನ್ನು ಮಂತ್ರಿ ಮಾಡಲು ನಿರ್ಧಾರ ಮಾಡಿಲ್ಲ : ಎಂಟಿಬಿ ಅಸಮಾಧಾನ
ಇದೇ ವೇಳೆ ಸಿ.ಪಿ ಯೋಗೇಶ್ವರ್ ಅವರಿಗೆ ಮಂತ್ರಿಸ್ಥಾನ ನೀಡುವ ಬಗ್ಗೆ ಮಾತನಾಡಿ, ಬಿಜೆಪಿ ಸರ್ಕಾರ ಬರಲು ಸಿ.ಪಿ. ಯೋಗೀಶ್ವರ್ ಬಹಳಷ್ಟು ಜವಾಬ್ದಾರಿ ಹೊತ್ತು ಕಾರ್ಯನಿರ್ವಹಿಸಿದ್ದಾರೆ. ಲಿಂಗಾಯತರಿಗೆ ಮೀಸಲಾತಿಗೆ ಬಿಜೆಪಿ ಹೈಕಮಾಂಡ್ ಕೊಕ್ಕೆ: ಪಂಚಮಸಾಲಿ ಸ್ವಾಮೀಜಿ ಹೋರಾಟದ ಎಚ್ಚರಿಕೆ..!
ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬುದು ನಮ್ಮ ಅಭಿಪ್ರಾಯವೂ ಆಗಿದೆ. ಅವರಿಗೆ ಸಚಿವ ಸ್ಥಾನ ಕೊಡಬೇಕು ಎನ್ನುವ ಒತ್ತಾಯವಿದೆ. ಅವರಿಗೂ ಸಚಿವ ಸ್ಥಾನದ ಅಪೇಕ್ಷೆ ಇದೆ. ಬಗ್ಗೆ ಕೇಂದ್ರದ ವರಿಷ್ಠರು ಮತ್ತು ಮುಖ್ಯಮಂತ್ರಿ ಅವರು ಸಮಾಲೋಚನೆ ಮಾಡುತ್ತಾರೆ.
ಬಿಜೆಪಿಯಲ್ಲಿದ್ದಾಗ ಎಲ್ಲರೂ ಒಂದೇ. ಒಳಗೆ ಹೊರಗೆ ಅನ್ನೋ ಭಾವನೆ ಸರಿಯಲ್ಲ, ತಾರತಮ್ಯಕ್ಕೆ ಅವಕಾಶ ಇಲ್ಲ. ಎಲ್ಲರನ್ನೂ ಕುಟುಂಬದ ರೀತಿ ಜೋಡಿಸಿಕೊಂಡು ಹೋಗಬೇಕಾಗುತ್ತದೆ ಎಂದು ಸಿ.ಪಿ ಯೋಗೇಶ್ವರ್ ಪರ ಅಶ್ವಥ್ ನಾರಾಯಣ್ ಬ್ಯಾಟ್ ಬೀಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel