ಮುಖ್ಯಮಂತ್ರಿ ಬದಲಾವಣೆ ಇಲ್ಲ : ಡಿಸಿಎಂ ಸ್ಪಷ್ಟನೆ
ಮೈಸೂರು : ಯಡಿಯೂರಪ್ಪ ನೇತೃತ್ವದಲ್ಲಿ ಕೋವಿಡ್ ನಿರ್ವಹಣೆ ನಡೆಯುತ್ತಿದ್ದು ನಾಯಕತ್ವದ ಬದಲಾವಣೆ ಪ್ರಕ್ರಿಯೆ ಇಲ್ಲ ಎಂದು ಡಿಸಿಎಂ ಡಾ.ಅಶ್ವತ್ಥ ನಾರಾಯಣ್ ಸ್ಪಷ್ಟಪಡಿಸಿದ್ದಾರೆ.
ಸಿಎಂ ಬದಲಾವಣೆ ಬಗ್ಗೆ ಸುತ್ತೂರು ಮಠದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಈ ರೀತಿಯ ಯಾವುದೇ ಪ್ರಕ್ರಿಯೆ ನಡೆಯುತ್ತಿಲ್ಲ, ಯಡಿಯೂರಪ್ಪ ನೇತೃತ್ವದಲ್ಲಿ ಕೋವಿಡ್ ಅನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದು, ಸಿಎಂ ಬದಲಾವಣೆ ಪ್ರಕ್ರಿಯೆ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ಕೋವಿಡ್ ಮುಕ್ತವಾಗಲು ಎಲ್ಲರೂ ಲಸಿಕೆ ಪಡೆಯಬೇಕು ಎಂದು ಮನವಿ ಮಾಡಿಕೊಂಡರು. ರಾಜ್ಯದಲ್ಲಿ ಸದ್ಯಕ್ಕೆ 100 ಬ್ಲ್ಯಾಕ್ ಫಂಗಸ್ ಸೋಂಕಿತರು ಇರುವ ಅಂದಾಜು ಇದ್ದು, ಇಲ್ಲಿಯವರೆಗೆ ಬ್ಲಾಕ್ ಫಂಗಸ್ ನಿಂದ ಯಾರು ಸಾವನ್ನಪ್ಪಿರುವ ಮಾಹಿತಿ ಇಲ್ಲ. ಈ ಬ್ಲಾಕ್ ಫಂಗಸ್ ಗೆ ಔಷಧವನ್ನು ಆಮದು ಮಾಡಿಕೊಳ್ಳಬೇಕಾಗಿದ್ದು, ಮುಂದಿನ ದಿನಗಳಲ್ಲಿ ನಮ್ಮಲ್ಲೇ ಔಷಧ ಉತ್ಪಾದನೆ ಮಾಡುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.