ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ. ಯಾವುದೇ ಹಾನಿಯಾಗದಂತೆ ಮುಂಜಾಗ್ರತ ಕ್ರಮ ತೆಗೆದುಕೊಳ್ಳಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಮಳೆಯಿಂದ ಯಾವುದೇ ತೊಂದರೆ ಆಗಬಾರದು. ರಾಜಕಾಲುವೆಗಳ ನೀರಿನ ಹರಿವಿನ ಪ್ರಮಾಣ ಸೇರಿದಂತೆ ರಸ್ತೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲಾಗಿದೆ. ಕಂಟ್ರೋಲ್ ರೂಮ್ ನವರು ಜಾಗೃತರಾಗಿದ್ದಾರೆ.
ಮಳೆ ಹೆಚ್ಚು ಬೀಳುತ್ತಿದ್ದು ಶಾಸಕಾಂಗ ಸಭೆಗೆ ಬರುವ ಹೊತ್ತಿನಲ್ಲಿ ರಸ್ತೆಯಲ್ಲಿ ಎರಡರಿಂದ ಮೂರು ಅಡಿ ನೀರು ಹರಿಯುತ್ತಿತ್ತು. ಇಂದು ರಾತ್ರಿಯೆಲ್ಲಾ ನಾನು ಸಹ ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದ್ದಾರೆ. ಶಾಸಕಾಂಗ ಸಬೆಯಲ್ಲಿ ವಿಧಾನ ಪರಿಷತ್ ಚುನಾವಣೆ ಕುರಿತು ಚರ್ಚೆಯಾಗಿದೆ ಎಂದು ಹೇಳಿದರು.