ಬೆಂಗಳೂರು : ನನಗೆ 70 ವರ್ಷ ವಯಸ್ಸಾಗಿದೆ. ನಾನು ಕೊರೊನಾ ಸಂಕಷ್ಟಕ್ಕೆ ಸಿಲುಕಿದ್ದೇನೆ. 600, 700 ಕಿ.ಮೀ.ಓಡಾಡಲು ಆಗುವುದಿಲ್ಲ ಎಂದು ಅಸಹಾಯಕತೆಯಿಂದ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ Deputy chief minister Govind Karajola ಕಣ್ಣೀರು ಹಾಕಿದ್ದಾರೆ (Deputy chief minister Govind Karajola tears ).
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಪ್ರಚಾರ ಮಾಡ್ತಾರೆ, ಪ್ರವಾಹದ ಸಂಕಷ್ಟದಲ್ಲಿ ಸಿಲುಕಿದವರ ಬಳಿ ಹೋಗಲ್ಲ ಎಂಬುದರ ಬಗ್ಗೆ ಪ್ರತಿಕ್ರಿಯಿಸಿದ ಕಾರಜೋಳ, ನನಗೆ 70 ವರ್ಷ.
ನಾನು ಇಷ್ಟು ವರ್ಷ ಯಾವ ರೀತಿ ಕೆಲಸ ಮಾಡಿದ್ದೇನೆ, ಕೊರೊನಾ ಸಂದರ್ಭದಲ್ಲಿ ಯಾವ ರೀತಿ ಕೆಲಸ ಮಾಡಿದ್ದೇನೆ ಎಂಬುದು ನಿಮಗೆ ತಿಳಿದಿದೆ.
ನಾನು, ನನ್ನ ಕುಟುಂಬ ನಿರಂತರವಾಗಿ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ್ದೇವೆ. ಹೀಗಾಗಿ 600-700 ಕಿ.ಮೀ. ಹೋಗಲು ಆಗಲ್ಲ ಎಂದು ಕಣ್ಣೀರು ಹಾಕಿದ್ದಾರೆ.
ಇದನ್ನೂ ಓದಿ : ಶಿರಾ ಬಿಜೆಪಿ ಅಭ್ಯರ್ಥಿ ಐಷಾರಾಮಿ ಕಾರು ಪ್ರಿಯ
ನನ್ನ ಪರಿಸ್ಥಿತಿ ಅರಿತುಕೊಂಡು ಮುಖ್ಯಮಂತ್ರಿ ಬಿಎಸ್ ವೈ ಅವರು ಕಂದಾಯ ಸಚಿವ ಆರ್.ಅಶೋಕ್ ಅವರನ್ನು ರಾಜ್ಯ ಪ್ರವಾಸಕ್ಕೆ ಕಳುಹಿಸಿದ್ದಾರೆ.
ನನ್ನ ಕುಟುಂಬದ ಸದಸ್ಯರು ಕೊರೊನಾದಿಂದ ಬಳಲುತ್ತಿದ್ದಾರೆ. ಇದನ್ನು ಸೂಕ್ಷ್ಮವಾಗಿ ಹೇಳುತಿದ್ದೇನೆ.
ಇದನ್ನೂ ಓದಿ : ಮೋದಿ ಕರ್ನಾಟಕವನ್ನು ನಿರ್ಲಕ್ಷಿಸುತ್ತಿದ್ದಾರೆ : ಹೆಚ್.ಡಿ.ಕುಮಾರಸ್ವಾಮಿ
ದಯಮಾಡಿ ಒಂದು ಘಟನೆಯನ್ನು ಇಟ್ಟುಕೊಂಡು ಒಬ್ಬ ವ್ಯಕ್ತಿಯನ್ನು ಅಳೆಯಬೇಡಿ ಎಂದು ಮನವಿ ಮಾಡಿಕೊಂಡರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel