ಬಸ್ ಪ್ರಯಾಣಿಕರಿಗೆ ಸಮಾಧಾನಕರ ಸುದ್ದಿ : ಸದ್ಯಕ್ಕಿಲ್ಲ ಪ್ರಯಾಣ ದರ ಏರಿಕೆ – ಡಿಸಿಎಂ ಸವದಿ
ಬೆಳಗಾವಿ : ಲಾಕ್ ಡೌನ್ ಸಡಿಲಿಕೆಗೊಂಡ ಬೆನ್ನಲ್ಲೇ ಪೆಟ್ರೋಲ್ , ಡೀಸೆಲ್ ದರ ಹೆಚ್ಚಾಗಿರುವ ಕಾರಣ ಬಸ್ ಪ್ರಯಾಣಿಕರಿಗೆ ಸರ್ಕಾರ ಶಾಕ್ ನೀಡಲಿದೆ ಎನ್ನಲಾಗಿತ್ತು.. ಅಂದ್ರೆ ಟಿಕೆಟ್ ದರ ಹೆಚ್ಚಳ ಮಾಡಲಿದೆ ಎಂಬ ಚರ್ಚೆಗಳ ನಡುವೆ ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ , ಸದ್ಯ ಬಸ್ ಪ್ರಯಾಣ ದರ ಏರಿಕೆ ಇಲ್ಲ ಎಂದು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ. ಕೊರೋನಾ ಸೋಂಕಿನಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಗಳಿಗೆ ಹಂತ ಹಂತವಾಗಿ 30 ಲಕ್ಷ ರೂ. ಪರಿಹಾರಧನ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಹವಾಮಾನ ವೈಪರೀತ್ಯಗಳಿಂದ ಬರುವ ವೈರಲ್ ಜ್ವರ ತಡೆಗಟ್ಟುವ ಮನೆಮದ್ದುಗಳು
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.