ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ – ಡಿಸಿಎಂ ಲಕ್ಷ್ಮಣ ಸವದಿ
ಬೆಳಗಾವಿ : ಬೆಳಗಾವಿ ಬಿಮ್ಸ್ ಆಸ್ಪತ್ರೆಯ ಅವ್ಯವಸ್ಥೆ, ಅನಾಚಾರದ ಬಗ್ಗೆ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಸಾಕಷ್ಟು ಅವ್ಯವಸ್ಥೆ ಇದೆ. ನಾನು ಕೋವಿಡ್ ವಾರ್ಡ್ ಗೆ ಭೇಟಿ ನೀಡಿದಾಗ ಸಾಕಷ್ಟು ಲೋಪದೋಷ ಕಂಡು ಬಂದಿದೆ. ಸೋಂಕಿತರ ಸಂಬಂಧಿಗಳು ಕೋವಿಡ್ ವಾರ್ಡಗಳಲ್ಲಿದ್ದಾರೆ. ನಾನು ಸಾಕಷ್ಟು ಐಸಿಯುಗಳನ್ನ ನೋಡಿದ್ದೇನೆ. ಜಿಲ್ಲಾಸ್ಪತ್ರೆಯ ಐಸಿಯು ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದೆ.
ನಾನು ಹೋದಾಗ ಇಬ್ಬರು ಸೋಂಕಿತರು ಮೃತ ಪಟ್ಟಿದ್ದರು. ವೈದ್ಯರಲ್ಲಿ ಸಮನ್ವಯತೆ ಇಲ್ಲ. ಒಬ್ಬೊಬ್ಬ ಅಧಿಕಾರಿಗಳು ಒಂದೊಂದು ಲೆಕ್ಕ ಕೊಡ್ತಾರೆ. ಜಿಲ್ಲೆಯ ಸರಕಾರಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಅಳವಡಿಕೆ ಕೂಡ ಸರಿಯಾಗಿ ನಡೆದಿಲ್ಲ. ಬೆಂಗಳೂರಿಗೆ ಹೋಗಿ, ಸಿಎಂ ಭೇಟಿಯಾಗುವೆ. ಈ ಎಲ್ಲ ಅವ್ಯವಸ್ಥೆ, ಅಧಿಕಾರಿಗಳ ನಿರ್ಲಕ್ಷದ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಬದಲಾವಣೆ ತರುವ ಆಶಾಭಾವನೆಯಲ್ಲಿ ಇದ್ದೇನೆ ಎಂದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.