ಚಿಕ್ಕೋಡಿ: ಕಬ್ಬಿನ ಗದ್ದೆಯಲ್ಲಿ 8 ನವಿಲುಗಳ ಮೃತದೇಹ ಪತ್ತೆಯಾಗಿರುವ ಘಟನೆ ಚಿಕ್ಕೋಡಿ (Chikkodi) ತಾಲೂಕಿನ ಮಾಂಜರಿ ಗ್ರಾಮದ ಬಳಿ ನಡೆದಿದೆ.
ಗ್ರಾಮದ ಹೊರವಲಯದಲ್ಲಿನ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಚಿಕ್ಕೋಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದಾರೆ.
ನವಿಲುಗಳಿಗೆ ವಿಷ ಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.