ಬೀದರ್: ನವಜಾತ ಶಿಶುವಿನ ಮೃತದೇಹವೊಂದು ಜಿಲ್ಲೆಯ ಚಿಟಗುಪ್ಪ ತಾಲೂಕಿನಲ್ಲಿ ಸಿಂಧನಕೇರಾ ಗ್ರಾಮದ ಬಸವೇಶ್ವರ ವೃತ್ತ ಹತ್ತಿರ ಚರಂಡಿ ಪಕ್ಕದಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ಹುಲಸೂರ ತಾಲೂಕಿನಲ್ಲಿ ನಿನ್ನೆಯಷ್ಟೇ ಹೆಣ್ಣು ಶಿಶುವಿನ ಭ್ರೂಣ ಪತ್ತೆಯಾಗಿತ್ತು. ಇದರ ಬೆನ್ನಲ್ಲಿಯೇ ಮತ್ತೊಂದು ಇಂತಹ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳೀಯರು ಚಿಟಗುಪ್ಪ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ತಪ್ಪಿತಸ್ಥರನ್ನು ಪತ್ತೆಹಚ್ಚಿ ಶಿಕ್ಷೆಗೆ ಗುರಿಪಡಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.








