ವಿಜಯಪುರ: ಕೃಷ್ಣಾ ನದಿಯಲ್ಲಿ (Krishna River) ತೆಪ್ಪ (Raft) ಮಗುಚಿ ಐವರು ಜಲಸಮಾಧಿಯಾದ ಪ್ರಕರಣ ಸುಖಾಂತ್ಯ ಕಂಡಿದೆ.
ಅಗ್ನಿಶಾಮಕ ದಳ ಸಿಬ್ಬಂದಿ ಐವರ ಮೃತದೇಹವನ್ನೂ ಪತ್ತೆ ಮಾಡಿ ನೀರಿನಿಂದ ಹೊರತೆಗೆದಿದ್ದು, ಕಾರ್ಯಾಚರಣೆ ಅಂತ್ಯವಾಗಿದೆ. ಜಲ ಸಮಾಧಿಯಾಗಿದ್ದ ಐವರ ಪೈಕಿ ಮೂವರ ಶವಗಳನ್ನು ಬುಧುವಾರ ಹೊರ ತೆಗೆಯಲಾಗಿತ್ತು. ಪುಂಡಲಿಕ ಯಂಕಂಚಿ, ತಯ್ಯಬ್ ಚೌಧರಿ ಹಾಗೂ ದಶರಥ ಗೌಡರ್ ಶವಗಳನ್ನು ತೆಗೆಯಲಾಗಿತ್ತು. ಇನ್ನುಳಿದ ಇಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿತ್ತು. ಇಂದು 30 ಜನ ಸಿಬ್ಬಂದಿ ಹಾಗೂ ಐದು ಬೋಟ್ಗಳ ಸಹಾಯದಿಂದ ಶೋಧಕಾರ್ಯ ಪ್ರಾರಂಭಿಸಿದ್ದು, ರಫೀಕ್ ಆಲಮೇಲ (40) ಹಾಗೂ ಮೆಹಬೂಬ್ ವಾಲಿಕಾರ್ (35) ಮೃತದೇಹವನ್ನು ಪತ್ತೆಹಚ್ಚಿ ನೀರಿನಿಂದ ಹೊರತೆಗೆದಿದ್ದಾರೆ.
ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ ಏಳು ಜನ ನೀರುಪಾಲಾಗಿದ್ದರು. ಈ ಪೈಕಿ ಓರ್ವ ಈಜಿ ದಡ ಸೇರಿದ್ದರೆ ಮತ್ತೊರ್ವ ವ್ಯಕ್ತಿಯನ್ನು ರಕ್ಷಿಸಲಾಗಿತ್ತು. ಘಟನೆಯಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.