ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ (Ballary Death Case) ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲು ಸಿದ್ಧನಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.
ಈ ವಿಚಾರವಾಗಿ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂದಿಸಿದಂತೆ ಬಿಜೆಪಿಯವರು (BJP) ಲೋಕಾಯುಕ್ತಕ್ಕೆ ದೂರು ನೀಡಲಿ. ಈ ಪ್ರಕರಣದಲ್ಲಿ ವಿಪಕ್ಷಗಳ ಸಹಕಾರವೂ ಬೇಕು. ನನ್ನ ತಪ್ಪಿದ್ದರೆ ರಾಜೀನಾಮೆ ನೀಡಲು ಸಿದ್ಧ. ಇದರಲ್ಲಿ ನನ್ನ ಪ್ರತಿಷ್ಠೆ ಏನಿಲ್ಲ. ಇದು ಜೀವದ ವಿಚಾರ. ನನ್ನ ರಾಜೀನಾಮೆಯಿಂದ ಸರಿಯಾಗುತ್ತದೆ ಅಂದರೆ, ಅದಕ್ಕೂ ಸಿದ್ಧ ಎಂದಿದ್ದಾರೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಲೇಬೇಕು. ಅದಕ್ಕಾಗಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.








