ಚಿತ್ರದುರ್ಗ: ಶ್ರೀಗಂಧದ ಮರ ಕಳ್ಳತನದ ವೇಳೆ ವಿದ್ಯುತ್ ತಂತಿ (Electric Wire) ಸ್ಪರ್ಶಿಸಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು (Hiriyur) ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಧ್ಯಪ್ರದೇಶ ಮೂಲದ ಮೋಹಿತ್(24), ಕತರ್ವ (38) ಎಂದು ಗುರುತಿಸಲಾಗಿದೆ. ಸಾವನ್ನಪ್ಪಿರುವ ವ್ಯಕ್ತಿಗಳು ಕೃಷ್ಣಾಪುರ ಗ್ರಾಮದ ಜಯರಾಂ ಎಂಬುವವರ ಅಡಿಕೆ ತೋಟಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ.
ಜಯರಾಂ ಅಡಿಕೆ ತೋಟದಲ್ಲಿ ಕೆಲ ಶ್ರೀಗಂಧದ ಮರಗಳಿದ್ದು, ಕಳ್ಳತನಕ್ಕೆ ಆಗಮಿಸಿದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅಬ್ಬಿನಹೊಳೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








