ಮ್ಯಾನ್ ಹೋಲ್ ನಲ್ಲಿ ಉಸಿರುಗಟ್ಟಿ ಪೌರಕಾರ್ಮಿಕರ ಸಾವು Mysore saaksha tv
ಮೈಸೂರು : ಮ್ಯಾನ್ ಹೋಲ್ ಸ್ವಚ್ಛತೆಗೆ ಇಳಿದು ಪೌರಕಾರ್ಮಿಕರ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮೈಸೂರಿನ ಪರಿಯಾಪಟ್ಟಣದಲ್ಲಿ ನಡೆದಿದೆ.
27 ವರ್ಷದ ಮಧು ಮೃತ ಪೌರ ಕಾರ್ಮಿಕನಾಗಿದ್ದಾರೆ.
ಇವರು ಪಿರಿಯಾಪಟ್ಟಣದ ವಾರ್ಡ್ ನಂ.10ರಲ್ಲಿ ಮ್ಯಾನ್ ಹೋಲ್ ಸ್ವಚ್ಚತೆಗೆ ಇಳಿದಿದ್ದರು.
ಈ ವೇಳೆ ಉಸಿರುಗಟ್ಟಿ ಅಸ್ವಸ್ಥರಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಇತ್ತ ಬಲವಂತವಾಗಿ ಪೌರಕಾರ್ಮಿಕರನ್ನ ಮ್ಯಾನ್ ಹೋಲ್ ಗೆ ಇಳಿಸಲಾಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ನಾರಾಯಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಪೌರಕಾರ್ಮಿಕರ ಮೃತಪಟ್ಟಿದ್ದು, ಮೃತ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ಇನ್ನು ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಭೇಟಿ, ಪೌರಕಾರ್ಮಿಕರ ಅಹವಾಲು ಸ್ವೀಕರಿಸಿದ್ದು, ಸೂಕ್ತ ಪರಿಹಾರದ ಭರವಸೆ ನೀಡಿದ್ದಾರೆ.