ಶಿವಮೊಗ್ಗ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಚಾರಣಾಧೀನ ಕೈದಿ (Prisoner) ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ (Shivamogga) ಕೇಂದ್ರ ಕಾರಾಗೃಹದಲ್ಲಿ (Central Jail) ನಡೆದಿದೆ.
ಆರೋಪಿ ಕಲೀಂ (37) ಮೃತಪಟ್ಟ ಕೈದಿ. ಈತನನ್ನು ಕಳೆದ ಒಂದು ತಿಂಗಳ ಹಿಂದೆ ಪೋಕ್ಸೋ (POCSO) ಕಾಯ್ದೆಯಡಿ ಬಂಧಿಸಲಾಗಿತ್ತು. ಕಲೀಂ ಕಿಡ್ನಿ ಸಮಸ್ಯೆ, ಲೋ ಬಿಪಿ, ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಅನಾರೋಗ್ಯ ಉಂಟಾದ ಹಿನ್ನೆಲೆಯಲ್ಲಿ ಶನಿವಾರ ಈತನನ್ನು ನಗರದ ಮೆಗ್ಗಾನ್ (Meggan) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕಲೀಂ ಸಾವಿನ ಕುರಿತು ಆತನ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಜೈಲಿನಲ್ಲಿ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.