ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಬಾಣಂತಿಯರ ಸಾವಿನ (Maternal Death) ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ, ನ್ಯಾಯ ಒದಗಿಸಬೇಕು ಎಂದು ಸಂಸದ ಡಾ.ಕೆ ಸುಧಾಕರ್ (K Sudhakar) ಆಗ್ರಹಿಸಿದ್ದಾರೆ.
ಈ ಕುರಿತು ಸಂಸದ ಸುಧಾಕರ್, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ (JP Nadda) ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳೆದ ಕೆಲವು ತಿಂಗಳುಗಳಿಂದ ಬಾಣಂತಿಯರು ಸಾವನ್ನುಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. 2024ರ ನವೆಂಬರ್‌ವರೆಗೆ 348 ತಾಯಂದಿರು ಸಾವನ್ನಪ್ಪಿದ್ದಾರೆ. ಆಗಸ್ಟ್‌ನಿಂದ ನವೆಂಬರ್‌ವರೆಗೆ ಕೇವಲ 4 ತಿಂಗಳಲ್ಲಿ 217 ಪ್ರಕರಣ ವರದಿಯಾಗಿವೆ. 217 ಪ್ರಕರಣಗಳಲ್ಲಿ 179 ಪ್ರಕರಣಗಳು ಸರ್ಕಾರಿ ಆಸ್ಪತ್ರೆಗಳಿಗೆ ಸಂಬಂಧಿಸಿದ್ದಾಗಿದೆ.
ಈ ಪೈಕಿ ಹೆಚ್ಚಿನ ಪ್ರಕರಣಗಳು ಪಿಪಿಎಚ್ ಹಾಗೂ ಎಎಫ್‌ಇ, ಅನೀಮಿಯ ಹಾಗೂ ನಿರ್ವಹಣೆಯಲ್ಲಿ ಲೋಪಕ್ಕೆ ಸಂಬಂಧಿಸಿದೆ. ಆಂಟಿಬಯೋಟಿಕ್ ಕೊರತೆ, ತರಬೇತಿ ಹೊಂದಿರುವ ಸಿಬ್ಬಂದಿ ಕೊರತೆ ಸೇರಿದಂತೆ ಹಲವಾರು ನಿರ್ಲಕ್ಷ್ಯಗಳಿಂದ ಇಂತಹ ಪ್ರಕರಣಗಳು ದಾಖಲಾಗಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಹೀಗಾಗಿ ತಾಯಂದಿರ ಮರಣಕ್ಕೆ ಕಾರಣ ಪತ್ತೆ ಮಾಡಲು ತುರ್ತಾಗಿ ಕಾರ್ಯಯೋಜನೆ ರೂಪಿಸಬೇಕಿದೆ. ಜೊತೆಗೆ ಕೇಂದ್ರ ಸರ್ಕಾರದಿಂದ ಸಂಶೋಧನಾ ತಂಡವನ್ನು ಕಳುಹಿಸಿ, ಕಾರಣ ಪತ್ತೆ ಜೊತೆಗೆ, ಪರಿಹಾರ ಶಿಫಾರಸು ಮಾಡಬೇಕಿದೆ ಎಂದು ಮನವಿ ಮಾಡಿದ್ದಾರೆ.
ದೇಶದ ಭವಿಷ್ಯದ ದೃಷ್ಟಿಯಿಂದ ನವಜಾತ ಶಿಶು ಹಾಗೂ ತಾಯಂದಿರ ಜೀವ ಕಾಪಾಡುವುದು ಬಹಳ ಅಗತ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್
ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...








