ಬೆಂಗಳೂರು : ನಿತ್ಯೋತ್ಸವ ಕವಿ ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅತ್ಯುತ್ತಮ ಸಾಹಿತ್ಯ ಸಂಕಲನಗಳನ್ನು ಕನ್ನಡಕ್ಕೆ ನೀಡಿದ ಅವರು, ನಿತ್ಯೋತ್ಸವ ಕವಿ ಎಂದೇ ಪ್ರಖ್ಯಾತಿ ಪಡೆದು ಕನ್ನಡಿಗರ ಮನೆಮಾತಾಗಿದ್ದರು. ಶಿವಮೊಗ್ಗದಲ್ಲಿ ಕೆಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು ಹಾಗೂ ವಿಶೇಷ ಬಾಂಧವ್ಯ ಹೊಂದಿದ್ದರು.
2/2.
ನಿಸಾರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು, ಅವರ ಕುಟುಂಬ ಸದಸ್ಯರು, ಅಭಿಮಾನಿಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.— B.S.Yediyurappa (@BSYBJP) May 3, 2020
2007ರಲ್ಲಿ ಶಿವಮೊಗ್ಗದಲ್ಲಿ ನಡೆದ 73 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ, ಪಂಪ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಗೆ ಭಾಜನರಾಗಿದ್ದ ಅವರು ಕನ್ನಡದ ಎಲ್ಲಾ ಪ್ರಾಕಾರಗಳನ್ನು ಶ್ರೀಮಂತಗೊಳಿಸಿದ್ದರು.
ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿಬಿದ್ದಂತಾಗಿದೆ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.