ದಾವಣಗೆರೆ : ರಾಜ್ಯ ಮೂಲದ ಪತಿ, ಪತ್ನಿ ಹಾಗೂ ಮಗು ಸೇರಿದಂತೆ ಮೂವರು ಅಮೆರಿಕಾದಲ್ಲಿ (America) ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೂವರನ್ನು ದಾವಣಗೆರೆ (Davanagere) ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದವರು ಎನ್ನಲಾಗಿದೆ. ಪತಿ ಹಾಗೂ ಪತ್ನಿಯೊಂದಿಗೆ 6 ವರ್ಷಗ ಗಂಡು ಮಗು ಕೂಡ ಸಾವನ್ನಪ್ಪಿದೆ. ಸಾವನ್ನಪ್ಪಿದ ಮೃತ ಪತಿ ಹಾಗೂ ಪತ್ನಿ ಇಬ್ಬರೂ ಇಂಜಿಯನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇವರು ಕಳೆದ 9 ವರ್ಷಗಳಿಂದ ಅಮೆರಿಕದಲ್ಲಿಯೇ ವಾಸವಿದ್ದರು. ಇವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ಮೃತರ ದೇಹಗಳನ್ನು ಸ್ವದೇಶಕ್ಕೆ ಕಳುಹಿಸುವಂತೆ ಮೃತರ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಯೋಗೇಶ್ ಹೊನ್ನಾಳ(37), ಪ್ರತಿಭಾ ಹೊನ್ನಾಳ್(35) ಹಾಗೂ ಯಶ್ ಹೊನ್ನಾಳ್(6) ಸಾವನ್ನಪ್ಪಿದ ದುರ್ದೈವಿಗಳು. ಈ ಘಟನೆ ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ ನಲ್ಲಿ ನಡೆದಿದೆ.