ಮುಂಬಯಿ: ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿರುವ ಮುಕೇಶ್ ಅಂಬಾನಿ (Mukesh Ambani) ಅವರಿಗೆ ಅಪರಿಚಿತ ವ್ಯಕ್ತಿ ಜೀವ ಬೆದರಿಕೆ (Death Threat) ಹಾಕಿದ್ದಾನೆ ಎನ್ನಲಾಗಿದೆ.
ಇಮೇಲ್ ಮೂಲಕ 20 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದು, ಕೊಡದಿದ್ದರೆ ಕೊಲೆ ಮಾಡುವುದಾಗಿ ಆತ ಬರೆದುಕೊಂಡಿದ್ದಾನೆ. ಶಾರ್ಪ್ ಶೂಟರ್‌ಗಳಿದ್ದಾರೆ ಎಂದು ಆ ವ್ಯಕ್ತಿ ಇಮೇಲ್‌ನಲ್ಲಿ ತಿಳಿಸಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಶೋಧ ಆರಂಭಿಸಿದ್ದಾರೆ.
ಈ ಇಮೇಲ್‌ನಲ್ಲಿ ಮುಕೇಶ್ ಹಣಕ್ಕೆ ಬೇಡಿಕೆ ಇಡಲಾಗಿದೆ. ಹಣ ನೀಡದಿದ್ದರೆ ಹತ್ಯೆ ಮಾಡಲಾಗುವುದು ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗಿದೆ. ಈ ಬಗ್ಗೆ ಮುಕೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.








