ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಷ್ಟ್ರೀಯ ಪಕ್ಷಿಗೆ ಸಾವಿನಲ್ಲೂ ಸಲ್ಲುತ್ತೆ ರಾಷ್ಟ್ರೀಯ ಗೌರವ

saaksha tv by saaksha tv
June 9, 2020
in Newsbeat, Saaksha Special, ದೇಶ - ವಿದೇಶ
Share on FacebookShare on TwitterShare on WhatsappShare on Telegram

ರಾಷ್ಟ್ರಕ್ಕೆ ವಿಶೇಷ ಸೇವೆ ಸಲ್ಲಿಸಿ ನಿಧನರಾಗುವ ಗಣ್ಯಾತಿಗಣ್ಯರು ಹಾಗೂ ಹುತಾತ್ಮ ಸೇನಾ ಯೋಧರಿಗೆ ಶಿಷ್ಟಾಚಾರದ ಪ್ರಕಾರ ರಾಷ್ಟ್ರಧ್ವಜ ಹೊದಿಸಿ ಗೌರವ ನೀಡುವುದು ಸರ್ವೇ ಸಾಮಾನ್ಯ. ಆದರೆ, ಭಾರತದ ರಾಷ್ಟ್ರೀಯ ಪಕ್ಷಿ ನವಿಲು ಒಂದು ವೇಳೆ ಸಾವನ್ನಪ್ಪಿದರೆ ಅದಕ್ಕೂ ರಾಷ್ಟ್ರ ಧ್ವಜ ಹೊದಿಸಿ ಅಂತಿಮ ಗೌರವ ಸಲ್ಲಿಸಿ ಅಂತ್ಯಸಂಸ್ಕಾರ ಸಲ್ಲಿಸಲಾಗುತ್ತದೆ ಎಂಬ ವಿಚಾರ ಬಹಳಷ್ಟು ಮಂದಿಗೆ ಗೊತ್ತೇ ಇಲ್ಲ. ಇಂತಹದೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಶಿಷ್ಟಾಚಾರ ಪಾಲಿಸಿದ ದೆಹಲಿ ಪೊಲೀಸರ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಗಣ್ಯ ವ್ಯಕ್ತಿ ಮೃತಪಟ್ಟಾಗ ಅಂತ್ಯಸಂಸ್ಕಾರ ಪ್ರಕ್ರಿಯೆ ನಡೆಯುವವರೆಗೂ ಮೃತದೇಹದ ಮೇಲೆ ತ್ರಿವರ್ಣ ಧ್ವಜ ಹೊದಿಸಲಾಗುತ್ತದೆ. ಅಂತ್ಯಸಂಸ್ಕಾರ ಸ್ಥಳದಲ್ಲಿ ಸಕಲ ಸರ್ಕಾರಿ ಗೌರವ ಸಲ್ಲಿಸಿದ ಬಳಿಕ ರಾಷ್ಟ್ರಧ್ವಜವನ್ನು ಮೃತದೇಹದಿಂದ ತೆಗೆಯಲಾಗುತ್ತದೆ. ಈ ಎಲ್ಲಾ ಪ್ರಕ್ರಿಯೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಯುತ್ತದೆ. ಹೀಗಂತ ಸಂವಿಧಾನದ ಶೆಡ್ಯೂಲ್-೧ರಲ್ಲಿ ಉಲ್ಲೇಖಿಸಲಾಗಿದೆ. ಶೆಡ್ಯೂಲ್-೧ರ ರಾಷ್ಟ್ರೀಯ ವನ್ಯಜೀವಿ ಸಂರಕ್ಷಣಾ ಕಾಯ್ದೆ ೧೯೭೨ರಲ್ಲಿ ಈ ಬಗ್ಗೆ ಸ್ಪಷ್ಟವಾಗಿ ತಿಳಿಸಲಾಗಿದೆ.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ರಾಷ್ಟ್ರೀಯ ಗೌರವ ಸಲ್ಲಿಕೆ ಹೇಗೆ ನಡೆಯುತ್ತೆ..!

ಅನಾರೋಗ್ಯ ಅಥವಾ ಅಪಘಾತ ಸೇರಿದಂತೆ ಬೇರೆ ಯಾವುದೇ ಕಾರಣಗಳಿಂದ ರಾಷ್ಟ್ರಪಕ್ಷಿ ನವಿಲು ಸಾವನ್ನಪ್ಪಿರುವ ವಿಷಯ ತಿಳಿದ ಕೂಡಲೇ ಸ್ಥಳೀಯ ಪೊಲೀಸರು ಅಥವಾ ಸೇನಾ ಸಿಬ್ಬಂದಿ ಸ್ಥಳಕ್ಕೆ ತೆರೆಳುತ್ತಾರೆ.
ರಾಷ್ಟ್ರಧ್ವಜದೊಂದಿಗೇ ಸ್ಥಳಕ್ಕೆ ತೆರಳುವ ಪೊಲೀಸರು, ನವಿಲಿನ ಮೃತದೇಹವನ್ನು ರಾಷ್ಟ್ರಧ್ವಜದಿಂದ ಸುತ್ತಿ ಎತ್ತಿಕೊಳ್ಳುತ್ತಾರೆ. ಈ ವೇಳೆ ಅಪ್ಪಿತಪ್ಪಿಯೂ ನವಿಲಿನ ಮೃತದೇಹವನ್ನು ಕೈಯಿಂದ ಮುಟ್ಟುವಂತಿಲ್ಲ. ಪ್ರತಿಯೊಂದು ಪ್ರಕ್ರಿಯೆಯೂ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಂತೆ ನಡೆಯುತ್ತದೆ.


ರಾಷ್ಟ್ರಧ್ವಜದಲ್ಲಿ ಸುತ್ತಿಕೊಂಡ ನವಿಲಿನ ಮೃತದೇಹವನ್ನು ಮೊದಲು ಕಟ್ಟಿಗೆಯ ಪೆಟ್ಟಿಗೆಯೊಂದರಲ್ಲಿ ಇಡಲಾಗುತ್ತದೆ. ನಂತರ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಸಂಸ್ಕಾರಕ್ಕೆ ಕೊಂಡೊಯ್ಯಲಾಗುತ್ತದೆ. ನಿಗದಿಪಡಿಸಿದ ಸ್ಥಳವೊಂದರಲ್ಲಿ ನವಿಲಿನ ಮೃತದೇಹವನ್ನಿಟ್ಟು ರಾಷ್ಟ್ರೀಯ ಗೌರವ ಸಲ್ಲಿಸಿದ ಬಳಿಕ ಮಣ್ಣು ಮಾಡಲಾಗುತ್ತದೆ.
ರಾಷ್ಟ್ರೀಯ ವನ್ಯಜೀವಿ ಸಂರಕ್ಷಣಾ ಕಾಯ್ದೆ ೧೯೭೨ರಲ್ಲಿ ಈ ಬಗ್ಗೆ ಉಲ್ಲೇಖಿಸಿದ್ದರೂ ನಿರ್ಲಕ್ಷ್ಯ ವಹಿಸಿದ್ದೇ ಜಾಸ್ತಿ ಎಂದು ವನ್ಯಜೀವಿ ಕಾರ್ಯಕರ್ತರ ಆರೋಪವಾಗಿದೆ.

ಚರ್ಚೆಗೆ ಗ್ರಾಸವಾದ ದೆಹಲಿ ಘಟನೆ

ಇತ್ತೀಚೆಗೆ ದೆಹಲಿಯ ಹೈಕೋರ್ಟ್ ಸಮೀಪ ನವಿಲೊಂದು ಗಾಯಗೊಂಡು ಬಿದ್ದಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಬರುತ್ತೆ. ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ತಿರಂಗ ಧ್ವಜ ಹೊದಿಸಿ ನವಿಲನ್ನು ಎತ್ತಿಕೊಳ್ಳುತ್ತಾರೆ. ಇದಕ್ಕೂ ಮುನ್ನ ಗೌರವ ಸಲ್ಲಿಸುವ ಪೊಲೀಸರು, ನಂತರ ನವಿಲನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ ನವಿಲು ಮೃತಪಟ್ಟಿದೆ. ಇದಾದ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ನವಿಲಿನ ಅಂತ್ಯಸಂಸ್ಕಾರ ನಡೆಸಲಾಯಿತು.
ವನ್ಯಜೀವಿ ಕಾಯ್ದೆ ಪ್ರಕಾರ ಮೃತ ನವಿಲಿಗೆ ರಾಷ್ಟ್ರೀಯ ಗೌರವ ನೀಡಿ ಅಂತ್ಯಸಂಸ್ಕಾರ ನಡೆಸಬೇಕು. ಶಿಷ್ಟಾಚಾರದ ಪ್ರಕಾರವೇ ಮೃತ ನವಿಲಿಗೆ ರಾಷ್ಟ್ರೀಯ ಗೌರವ ನೀಡಿ ಅಂತ್ಯಸಂಸ್ಕಾರ ನಡೆಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Tags: national bird
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram