ದೇಶದಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ದೇಶವನ್ನು 21 ದಿನಗಳ ಕಾಲ ಲಾಕ್ ಡೌನ್ ಮಾಡಿದರೂ ಸಹ ಕೊರೊನಾ ವೈರಸ್ ಹರಡುವಿಕೆ ಹೆಚ್ಚಾಗುತ್ತಲಿದೆ. ಇದೀಗ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಸಾವು ಸೇರಿದಂತೆ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 16ಕ್ಕೆ ಏರಿದೆ. ಸೋಂಕಿಗೆ ಬಲಿಯಾದ ವ್ಯಕ್ತಿ ಶ್ರೀನಗರದ ಹೈದೆರಾಪೋರಾದ ನಿವಾಸಿ ಎಂದು ಗುರುತಿಸಲಾಗಿದೆ. ಆಸ್ಪತ್ರೆಯೊಂದರ ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಯೋಜನಾ ಆಯೋಗದ ಅಧಿಕಾರಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ. ಬಲಿಯಾಗಿರುವ ವ್ಯಕ್ತಿಯೊಂದಿಗೆ ನಾಲ್ಕು ಜನ ಇದ್ದರು. ಅವರಲ್ಲೂ ಸೋಂಕು ದೃಡಪಟ್ಟಿದೆ . ನಾಲ್ಕು ಜನರನ್ನು ಗುರುತಿಸಲಾಗಿದೆ, ಅವರನ್ನು ಪ್ರತ್ಯೇಕವಾಗಿ ಇಡಲು ಸೂಚನೆ ನೀಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ
ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!
ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...







