ನವದೆಹಲಿ: ದೇಶದಲ್ಲಿ ಕೊರೊನಾಸುರ ತನ್ನ ಮರಣಮೃದಂಗವನ್ನು ಮುಂದುವರಿಸಿದ್ದು, ಇಂದು ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಗುಜರಾತ್ ನ ಅಹಮದಾಬಾದ್ ನಲ್ಲಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 45 ವರ್ಷದ ವ್ಯಕ್ತಿ ಇಂದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಈ ವ್ಯಕ್ತಿಯ ಸಾವಿನಿಂದ ಗುಜರಾತ್ ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಇದರಂತೆ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ವ್ಯಕ್ತಿಯೊಬ್ಬರೂ ಬಲಿಯಾಗಿದ್ದು, ದೇಶದಲ್ಲಿ ವೈರಸ್ ನಿಂದ ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಸೋಂಕಿತರ ಸಂಖ್ಯೆ 1000 ಗಡಿಯತ್ತ ಸಾಗಿದೆ.