ಬೆಂಗಳೂರು: ಕರ್ನಾಟಕ ಬಂದ್, ಭಾರತ್ ಬಂದ್, ರೈತರು, ಸಾರಿಗೆ ನೌಕರರ ನಂತರ ಈಗ ಖಾಸಗಿ ಶಾಲೆಗಳ ಶಿಕ್ಷಕರ ಸರದಿ. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನುದಾನರಹಿತ ಖಾಸಗಿ ಶಾಲೆಗಳು ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಧರಣಿ ಹಮ್ಮಿಕೊಂಡಿವೆ.
ಖಾಸಗಿ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಕಿ ಶುಲ್ಕ, ಉಚಿತ ಕೊರೊನಾ ಲಸಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆಗೆ ನಡೆಸಲು ಮುಂದಾಗಿದ್ದಾರೆ.

`ನಮ್ಮ ನಡೆ ಶಿಕ್ಷಕರ ಕಡೆ, ಶಿಕ್ಷಣ ಸಂಸ್ಥೆಗಳು-ಶಿಕ್ಷಕರು ಉಳಿದರೆ ಶಿಕ್ಷಣ’ ಘೋಷಣೆಯಡಿ ಖಾಸಗಿ ಶಾಲೆಗಳು ಪ್ರತಿಭಟನೆಗೆ ನಡೆಸಲಿವೆ. ಡಿ.16ರಂದು ಮೌರ್ಯವೃತ್ತದಲ್ಲಿ ಸೇರಲಿರುವ ಸಾವಿರಾರು ಖಾಸಗಿ ಶಾಲೆಗಳ ಶಿಕ್ಷಕರು, ಫ್ರೀಡಂಪಾರ್ಕ್ವರೆಗೆ ಪಾದಯಾತ್ರೆ ನಡೆಸಿ ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದಾರೆ.
ಖಾಸಗಿ ಶಾಲೆಗಳ ಶಿಕ್ಷಕರ ಬೇಡಿಕೆಗಳು..
1. ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗೆ ಕೋವಿಡ್ ಲಸಿಕೆ ಪ್ರಥಮ ಹಂತದಲ್ಲಿಯೇ(ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ) ಉಚಿತವಾಗಿ ನೀಡುವುದು.
2. ಶಿಕ್ಷಕ-ಶಿಕ್ಷೇತರ ಸಿಬ್ಬಂದಿಗೆ ಆಹಾರ ಕಿಟ್ ನೀಡುವುದು
3. ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗೆ ಗೌರವಧನ ಬಿಡುಗಡೆ ಮಾಡುವುದು
4. ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗೆ ರಾಜ್ಯ ಸರ್ಕಾರ ಪ್ರತ್ಯೇಕ ವಿಮೆ ಸೌಲಭ್ಯ ನೀಡುವುದು
5. ಶಿಕ್ಷಣ ಸಂಸ್ಥೆಗಳ ಪುನಾರಂಭ, ದಾಖಲಾತಿ, ಹಾಜರಾತಿ, ಕನಿಷ್ಠ ಮೌಲ್ಯಮಾಪನದ ತೇರ್ಗಡೆ, ಬಾಕಿ, ಕನಿಷ್ಠಿ ಶುಲಕ್ ಕಟ್ಟಿ ದಾಖಲಾತಿ ಮಾಡುವ ಬಗ್ಗೆ ಸ್ಪಷ್ಟೀಕರಣ ಆದೇಶ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ(ಕ್ಯಾಮ್ಸ್) ಆಗ್ರಹಿಸಿ ಈ ಪ್ರತಿಭಟನೆ ಕರೆ ನೀಡಿದ ಎಂದು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








