ಮೇ.23ಕ್ಕೆ ಲಾಕ್ ಡೌನ್ ವಿಸ್ತರಣೆ ಕುರಿತು ತೀರ್ಮಾನ Lockdown
ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಮೇ 23 ರಂದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದಿನ ಸುದ್ದಿಗೋಷ್ಠಿಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುತ್ತಾರೆ ಎಂದು ಎಲ್ಲರೂ ಅಂದಾಜಿಸಿದ್ದರು.
ಆದ್ರೆ ಬಿಎಸ್ ಯಡಿಯೂರಪ್ಪನವರು ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ 23 ರಂದು ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ಇನ್ನುಳಿದಂತೆ ಇಂದಿನ ಸುದ್ದಿಗೋಷ್ಠಿಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ.
ಬರೋಬ್ಬರಿ 1,250 ಕೋಟಿ ಪ್ಯಾಕೇಜ್ ಅನ್ನು ಸಿಎಂ ಘೋಷಣೆ ಮಾಡಿದ್ದು, ಕ್ಯಾಬ್, ಆಟೋ ಚಾಲಕರಿಗೆ ಪ್ರತಿ ಚಾಲಕನಿಗೆ 3000 ಸಹಾಯಧನ. ಕಟ್ಟಡ ಕಾರ್ಮಿಕರಿಗೆ ತಲಾ 3000 ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.










