ಬೆಂಗಳೂರು: ದೇಶದಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗಿರುವುದರಿಂದ ಮೇ 3ರ ಬಳಿಕವೇ ರಾಜ್ಯದಲ್ಲಿ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಮೇ 3ರವರೆಗೂ ಲಾಕ್‌ಡೌನ್ ಮುಂದುವರಿಕೆ ಮಾಡಲಾಗಿದೆ. ಇದರ ಬಗ್ಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪಷ್ಟನೆ ನೀಡಿದ್ದಾರೆ. ನಮ್ಮ ರಾಜ್ಯವು ಕೂಡ ಮೇ 3 ರವರೆಗೂ ಲಾಕ್‌ಡೌನ್ ಮುಂದುವರೆಸಲಿದೆ. ಹೀಗಾಗಿ, ದ್ವಿತೀಯ ಪಿಯುಸಿಗೆ ಬಾಕಿಯಿರುವ ಒಂದು ಭಾಷೆಯ ಪರೀಕ್ಷೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವಿಚಾರಗಳನ್ನು ಮೇ 3 ರವರೆಗೂ ಮುಂದೂಡಲಾಗಿದೆ. ಪರೀಕ್ಷೆಯ ಬಗ್ಗೆ ಯಾವುದೇ ನಿರ್ಧಾರಗಳು ಆದ್ರೂ, ಅದು ಮೇ 3 ರ ಬಳಿಕವೇ ಎಂದು ಸುರೇಶ್‌ಕುಮಾರ್ ತಿಳಿಸಿದ್ದಾರೆ.








