ಮುಂಬೈ: ಮರಾಠ ರಾಣಿ ಅಹಲ್ಯಾಬಾಯಿ ಹೋಳ್ಕರ್ ಹೆಸರನ್ನು ಅಹ್ಮದ್ನಗರ ಜಿಲ್ಲೆಗೆ ನಾಮಕರಣ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.
ಈಗಾಗಲೇ ಈ ಕುರಿತು ಸರ್ಕಾರ ಅನುಮೋದನೆ ನೀಡಿದೆ. 18ನೇ ಶತಮಾನದ ರಾಣಿ ಅಹಲ್ಯಾಬಾಯಿ ಹೋಳ್ಕರ್ 298ನೇ ಜನ್ಮದಿನದಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮರುನಾಮಕರಣ ಮಾಡುವ ಪ್ರಸ್ತಾಪ ಘೋಷಿಸಿದ್ದರು. ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಮಹಾರಾಷ್ಟ್ರ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಬಿಜೆಪಿ ಶಾಸಕ ಗೋಪಿಚಂದ್ ಪಡಲ್ಕರ್ ಸೇರಿದಂತೆ ಹಲವರು ಈ ವೇಳೆ ಇದ್ದರು.
ಔರಂಗಾಬಾದ್ ಮತ್ತು ಒಸ್ಮಾನಾಬಾದ್ ನಗರಗ ಹೆಸರನ್ನು ಕ್ರಮವಾಗಿ ಛತ್ರಪತಿ ಸಂಭಾಜಿ ನಗರ ಮತ್ತು ಧಾರಾಶಿವ್ ಎಂದು ಮರುನಾಮಕರಣ ಮಾಡಿದ ನಂತರ ಸದ್ಯ ಅಹ್ಮದ್ ನಗರ ದ ಹೆಸರನ್ನು ಬದಲಾಯಿಸಲು ಅಲ್ಲಿನ ಸರ್ಕಾರ ಮುಂದಾಗಿದೆ.