ದಕ್ಷಿಣ ಕನ್ನಡ ಜಿಲ್ಲೆ, ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ, ದೀನದಯಾಳ್ ಅಂತ್ಯೋದಯ ಯೋಜನೆಯಡಿ, ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ, 11 ತಿಂಗಳು ಅವಧಿಯ ತಾತ್ಕಾಲಿಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ಸ್ವ-ವಿವರ (Resume) ಹಾಗೂ ಅಗತ್ಯ ದಾಖಲೆಗಳನ್ನು ಪಿಡಿಎಫ್ ಸ್ಕ್ಯಾನ್ ಮಾಡಿ, 30-12-2024 ರೊಳಗಾಗಿ ಈ ಕೆಳಗಿನ ಇ-ಮೇಲ್ ವಿಳಾಸಕ್ಕೆ ಸಲ್ಲಿಸಬಹುದಾಗಿದೆ: skillmnglr@gmail.com.
ಹುದ್ದೆಯ ವಿವರಗಳು: ಮಲ್ಟಿ-ಟಾಸ್ಕಿಂಗ್ ಅಧಿಕಾರಿ
ವಯೋಮಿತಿ: ಅರ್ಜಿದಾರರು 45 ವರ್ಷದೊಳಗಿನವರಾಗಿರಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30-12-2024.
ಆಯ್ಕೆ ಪ್ರಕ್ರಿಯೆ: ಅರ್ಜಿದಾರರ ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ, ಸಂದರ್ಶನ ಆಯೋಜಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಇ-ಮೇಲ್ ವಿಳಾಸ: skillmnglr@gmail.com
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಲು:
Shree Mahalasa Services, ಉಡುಪಿ, ದೂರವಾಣಿ: 0820-2525727
ಮಹತ್ವದ ಸೂಚನೆ:
ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲಸ ಮಾಡಲು ಸಿದ್ಧರಾಗಿರಬೇಕು.
ಮೊದಲ ಮೂರು ತಿಂಗಳು ₹ ನಂತರ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ ₹5,000/- ವೇತನ ಹೆಚ್ಚಿಸಲಾಗುತ್ತದೆ.