CSK | ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ!
ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ! ಗಾಯದ ಸಮಸ್ಯೆಯಿಂದ ಹೊರಗುಳಿದಿರುವ ಸ್ಟಾರ್ ಬೌಲರ್ ದೀಪಕ್ ಚಾಹರ್ ಶೀಘ್ರದಲ್ಲೇ ತಂಡಕ್ಕೆ ಮರಳುವ ಸಾಧ್ಯತೆ ಇದೆ.
ಮೊದಲೇ ಹೇಳಿದಂತೆ ಅವರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿಲ್ಲ ಎಂದು, ಏಪ್ರಿಲ್ ಎರಡನೇ ವಾರದ ವೇಳೆಗೆ ಅವರು ತಂಡಕ್ಕೆ ಲಭ್ಯವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ನಡೆದ ಐಪಿಎಲ್ ಮೆಗಾ ಹರಾಜು-2022 ರ ಅಂಗವಾಗಿ ಮಿಸ್ಟರ್ ಕೂಲ್ ಧೋನಿ ನೇತೃತ್ವದ ಸಿಎಸ್ಕೆ ದೀಪಕ್ ಚಹಾರ್ ಅವರನ್ನು 14 ಕೋಟಿ ರೂ.ಗೆ ಖರೀದಿಸಿತ್ತು.
ಆದ್ರೆ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ T20I ನಲ್ಲಿ, ಮಂಡಿರಜ್ಜು ಗಾಯಗೆ ತುತ್ತಾಗಿದ್ದರು. ಹೀಗಾಗಿ ಅವರು ಈ ಬಾರಿಯ ಐಪಿಎಲ್ ಗೆ ಅಲಭ್ಯರಾಗಲಿದ್ದಾರೆ ಎಂಬ ವದಂತಿ ಹರಡಿತ್ತು.
ಇತ್ತೀಚಿನ ಮಾಹಿತಿ ಪ್ರಕಾರ, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಹಾರ್ಗೆ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ ಎಂದು ತರಬೇತುದಾರರು ಹೇಳಿದ್ದಾರೆ.
ಟೈಮ್ಸ್ ಆಫ್ ಇಂಡಿಯಾ ಲೇಖನದ ಪ್ರಕಾರ ಅವರು ಇನ್ನೆರಡು ವಾರಗಳಲ್ಲಿ ಚೆನ್ನೈ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಐಪಿಎಲ್ 2021ರ ಋತುವಿನಲ್ಲಿ 15 ಪಂದ್ಯಗಳನ್ನು ಆಡಿರುವ ದೀಪಕ್ ಚಹಾರ್ 14 ವಿಕೆಟ್ಗಳನ್ನು ಕಬಳಿಸಿ ತಂಡ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
IPL-2022 ಮಾರ್ಚ್ 26 ರಂದು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರನ್ನರ್ ಅಪ್ ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದೊಂದಿಗೆ ಆರಂಭಗೊಳ್ಳುತ್ತದೆ.
deepak-chahar-likely-join-csk on mid april









