ಜವಾನ್’ ಸಿನಿಮಾ (Jawan Movie) ಈಗ ಸಖತ್ ಸದ್ದು ಮಾಡುತ್ತಿದೆ. ಬಾಕ್ಸ್ ಆಫೀಸ್ನಲ್ಲಿ ನೂರಾರು ಕೋಟಿ ರೂ. ಗಳಿಸುತ್ತಿದೆ.
ಜವಾನ್ ಚಿತ್ರದ ಮೂಲಕ ಶಾರುಖ್ ಖಾನ್ ಒಂದೇ ವರ್ಷದಲ್ಲಿ ಎರಡನೇ ಯಶಸ್ಸು ಕಂಡಿದ್ದಾರೆ. ಈ ಚಿತ್ರದಲ್ಲಿ ನಯನತಾರಾ, ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರಾ, ವಿಜಯ್ ಸೇತುಪತಿ, ದೀಪಿಕಾ ಪಡುಕೋಣೆ (Deepika Padukone) ಸೇರಿದಂತೆ ಹಲವರು ನಟಿಸಿದ್ದಾರೆ.
ಈ ಚಿತ್ರದಲ್ಲಿ ಅಭಿನಯಿಸಲು ಕಲಾವಿದರು ಎಷ್ಟು ಸಂಭಾವನೆ ಪಡೆದಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ. ಅಚ್ಚರಿಯ ವಿಚಾರ ಎಂದರೆ ದೀಪಿಕಾ ಪಡುಕೋಣೆ ಅತಿಥಿ ಪಾತ್ರ ಮಾಡಿದ್ದಕ್ಕೆ ಯಾವುದೇ ಸಂಭಾವನೆ ಪಡೆದಿಲ್ಲ ಎನ್ನಲಾಗಿದೆ. ದೀಪಿಕಾ ಪಡುಕೋಣೆ ಅವರು ‘ಜವಾನ್’ ಸಿನಿಮಾದಲ್ಲಿ ನಟಿಸಲು 15 ಕೋಟಿ ರೂಪಾಯಿ ಚಾರ್ಜ್ ಮಾಡಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು. ಆದರೆ, ಇದನ್ನು ಅವರು ಅಲ್ಲಗಳೆದಿದ್ದಾರೆ. ಸಂಭಾವನೆ ಪಡೆದಿಲ್ಲ ಎಂದು ಅವರು ಹೇಳಿದ್ದಾರೆ.
ಭಾರತ ವಿಶ್ವಕಪ್ ಗೆದ್ದ ಕಥೆಯನ್ನು ಆಧರಿಸಿ ‘83’ ಚಿತ್ರವನ್ನು ಮಾಡಲಾಗಿತ್ತು. ಇದರಲ್ಲೂ ದೀಪಿಕಾ ಅತಿಥಿ ಪಾತ್ರ ಮಾಡಿದ್ದರು. ಅದಕ್ಕೂ ಸಂಭಾವನೆ ಪಡೆದಿರಲಿಲ್ಲ ಎಂದು ಹೇಳಿದ್ದಾರೆ.