ಬಾಲಿವುಡ್ ನಟಿ ದೀಪಿಕಾ ಕುಟುಂಬಸ್ಥರಿಗೆ ಕೊರೊನಾ ಪಾಸಿಟಿವ್..!
ಬೆಂಗಳೂರು : ಬಾಲಿವುಡ್ ನ ಸ್ಟಾರ್ ನಟಿ ದೀಪಿಕಾ ಪಡುಕೋಣೆ ತಂದೆ ಪ್ರಕಾಶ್ ಪಡುಕೋಣೆಗೆ ಈಗಾಗಲೇ ಕೊರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಇದರ ಬೆನ್ನಲ್ಲೇ ದೀಪಿಕಾ ಪಡುಕೋಣೆಯ ಇಡೀ ಕುಟುಂಬಕ್ಕೆ ಸೋಂಕು ತಗುಲಿದೆ ಎಂದು ಹೇಳಲಾಗಿದೆ.
ನಟಿ ದೀಪಿಕಾ ಪಡುಕೋಣೆಗೂ ಕೊರೊನಾ ಪಾಸಿಟಿವ್ ಆಗಿದ್ದು, ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ ಎನ್ನಲಾಗಿದೆ. ಕೊರೊನಾ 2ನೇ ಅಲೆ ಹೆಚ್ಚಾದ ಬೆನ್ನಲ್ಲೇ ಮುಂಬೈ ತೊರೆದು ಬೆಂಗಳೂರಿಗೆ ಬಮದು ತಂದೆ-ತಾಯಿ ಜೊತೆ ನೆಲೆಸಿದ್ದಾರೆ.
ಮೂಲಗಳ ಪ್ರಕಾರ ದೀಪಿಕಾ ತಾಯಿ ಉಜ್ವಲಾ ಮತ್ತು ಸಹೋದರಿ ಅನಿಷಾ ಪಡುಕೋಣೆಗೂ ಕೊರೊನಾ ಸೋಂಕು ತಗುಲಿದೆ ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಈವರೆಗೂ ದೀಪಿಕಾ ಪಡುಕೋಣೆ ಅಧಿಕೃತವಾಗಿ ಯಾವುದೇ ಮಾಹಿತಿಯನ್ನ ಬಹಿರಂಗಪಡಿಸಿಲ್ಲ..
ದೇಶದಲ್ಲಿ ಕೊರೊನಾಗೆ ಲೆಕ್ಕವಿಲ್ಲದಷ್ಟು ಮಂದಿ ಬಲಿಯಾಗ್ತಿದ್ದಾರೆ. ಅದೆಷ್ಟೋ ಜನರು ತಮ್ಮವರನ್ನ ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಸಿನಿ ತಾರಯರು ಸಹ ತಮ್ಮರನ್ನ ಕಳೆದುಕೊಂಡು ನೋವನ್ನ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ತಿದ್ದಾರೆ.








