ಶಿವಮೊಗ್ಗ: ಆಹಾರ ಅರಸುತ್ತ ಕಾಡಿನಿಂದ ನಾಡಿನತ್ತ ಜಿಂಕೆಯೊಂದು ಬೀದಿನಾಯಿಗಳ ದಾಳಿಯಿಂದ ಗಾಯಗೊಂಡ ಘಟನೆ ಶಿವಮೊಗ್ಗದ ಸೊರಬದ ಉರಗನಹಳ್ಳಿಯ ಗ್ರಾಮದಲ್ಲಿ ನಡೆದಿದೆ.
ಹೀಗೆ ಗಾಯಗೊಂಡಿದ್ದ ಜಿಂಕೆಯನ್ನು ಗ್ರಾಮಸ್ಥರು ನಾಯಿಗಳಿಂದ ರಕ್ಷಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಗ್ರಾಮದ ಅವಿನಾಶ್, ಪುನೀತ್ ಈ, ಶರತ್, ಪ್ರಸನ್ನ, ಸಚಿನ್, ನಿತೀಶ್, ಸಂತೋಷ್ ಎಂಬುವವರ ಜೊತೆಗೆ ಇನ್ನೂ ಹಲವರು ಸೇರಿ ಜಿಂಕೆಯನ್ನು ರಕ್ಷಿಸಿದ್ದಾರೆ. ಬಳಿಕ ಈ ವಿಷಯವನ್ನ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆಯನ್ನು ಮರಳಿ ಕಾಡಿಗೆ ಸುರಕ್ಷಿತವಾಗಿ ಬಿಟ್ಟಿದ್ದು, ಗ್ರಾಮಸ್ಥರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.








