ರಾಯಚೂರು: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದಡಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಜಿಲ್ಲೆಯ ಮಾನ್ವಿ ತಾಲೂಕಿನ ಸಿರವಾರದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದೆ ಎನ್ನಲಾಗಿದ್ದು, ಸಿಬ್ಬಂದಿ ಅಮಾನತು ಮಾಡಿ ರಾಯಚೂರು (Raichur) ಎಸ್ಪಿ ಬಿ.ನಿಖಿಲ್ ಆದೇಶಿಸಿದ್ದರು.
ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಹತ್ತಿರ ಇರುವ ಟಿಪ್ಪು ಸರ್ಕಲ್‌ನಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ರಾತ್ರೋರಾತ್ರಿ ಕೆಲ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದರು. ಇದಕ್ಕೆ ಮುಸ್ಲಿಂ ಮುಖಂಡರು ತೀವ್ರ ಆಕ್ರೋಶ ಹೊರ ಹಾಕಿದ್ದರು. ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು.