ಬಾಬಾ ರಾಮ್ ದೇವ್ ಅವರಿಗೆ 1000 ಕೋಟಿ ರೂ. ಮಾನನಷ್ಟ ನೋಟಿಸ್ ..!
ನವದೆಹಲಿ: ಯೋಗ ಗುರು ಬಾಬಾ ರಾಮ್ ದೇವ್ ಗೆ ಭಾರತೀಯ ವೈದ್ಯಕೀಯ ಸಂಘ(ಐಎಂಎ)ದ ಉತ್ತರಾಖಂಡ್ ವಿಭಾಗ ಬರೋಬ್ಬರಿ 1000 ಕೋಟಿ ರೂಪಾಯಿಗಳ ಮಾನನಷ್ಟ ನೋಟಿಸ್ ನೀಡಿದೆ. ಹೌದು.. ಬಾಬ ರಾಮ್ ದೇವ್ ನೀಡಿದ ಹೇಳಿಕೆಯನ್ನ ಖಂಡಿಸಿ ಮಾನನಷ್ಟ ಮೊಕದಮ್ಮೆ ಹೂಡಲಾಗಿದೆ. ಬಾಬಾ ರಾಮ್ದೇವ್ ಅವರು ತಮ್ಮ ಹೇಳಿಕೆ ಕುರಿತು ವೀಡಿಯೋ ಪೋಸ್ಟ್ ಮಾಡಬೇಕು ಹಾಗೂ 15 ದಿನಗಳೊಳಗೆ ಲಿಖಿತ ರೂಪದಲ್ಲಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ 1000 ಕೋಟಿ ರೂ.ಗಳನ್ನು ಬೇಡಿಕೆ ಇಡುತ್ತೇವೆ ಎಂದು ಐಎಂಎ ನೋಟಿಸ್ ನಲ್ಲಿ ಉಲ್ಲೇಖಿಸಿದೆ.
ಐಎಂಎನ ಉತ್ತರಾಖಂಡ್ ವಿಭಾಗ ಬಾಬಾ ರಾಮ್ದೇವ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಉತ್ತರಾಖಂಡ್ ಮುಖ್ಯಮಂತ್ರಿ ತಿರಾಥ್ ಸಿಂಗ್ ಹಾಗೂ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ. ಬಳಿಕ ಆರೋಗ್ಯ ಸಚಿವ ಹರ್ಷ್ ವರ್ಧನ್ ಅವರ ಪತ್ರದ ನಂತರ ಬಾಬಾ ರಾಮ್ದೇವ್ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಇತ್ತೀಚೆಗೆ ಬಾಬಾ ರಾಮ್ ದೇವ್ ಅವರು ಅಲೋಪತಿ ಸರ್ವಶಕ್ತ ಮತ್ತು ‘ಸರ್ವಗುಣ ಸಂಪನ್ನ’ ಎನ್ನುವುದಾದರೆ ವೈದ್ಯರು ಅನಾರೋಗ್ಯಕ್ಕೆ ಒಳಗಾಗಬಾರದು ಎಂದು ಹೇಳಿದ್ದರು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








