ಮತಾಂತರಕ್ಕಿಂತ ಪಕ್ಷಾಂತರ ಅಪಾಯಕಾರಿ : ತನ್ವೀರ್ ಸೇಠ್ tanveer sait saaksha tv
ಮೈಸೂರು : ಮತಾಂತರ ನಿಷೇಧ ಕಾಯ್ದೆಗಿಂತ ಪಕ್ಷಾಂತರ ಅಪಾಯಕಾರಿ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತನ್ವೀರ್ ಸೇಠ್, ಮತಾಂತರ ನಿಷೇಧ ವಿಧೇಯಕ ಬಗ್ಗೆ ವಿರೋಧ ವ್ಯಕ್ತಪಡಿಸಿದರು.
ಮತಾಂತರ ನಿಷೇಧಕ್ಕಿಂತ ಪಕ್ಷಾಂತರ ಅಪಾಯಕಾರಿ. ಪಕ್ಷಾಂತರಿಗಳಿಂದ ನಡೆಯುತ್ತಿರುವ ಸರ್ಕಾರಕ್ಕೆ ಕಾಯ್ದೆ ಜಾರಿಗೆ ತರೋ ನೈತಿಕತೆ ಇಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಯಾರು ಯಾವ ಧರ್ಮಕ್ಕೆ ಬೇಕಾದ್ರೂ ಹೋಗಬಹುದು. ನಮ್ಮದು ಜಾತ್ಯಾತೀತ ರಾಷ್ಟ್ರ. ನಮಗೆ ಸಂವಿಧಾನ ಎಲ್ಲಾ ರೀತಿಯ ಧಾರ್ಮಿಕ ಸ್ವಾತಂತ್ರ್ಯ ನೀಡಿದೆ.
ಧಾರ್ಮಿಕ ಸ್ವಾತಂತ್ರ್ಯ ಪ್ರತಿಯೊಬ್ಬ ಪ್ರಜೆಯ ಹಕ್ಕು. ವಿಧಾನಸಭೆಯಲ್ಲಿ ಅಂಗೀಕಾರ ಆಗಿದೆ.
ಆದರೆ ವಿಧಾನ ಪರಿಷತ್ ನಲ್ಲಿ ಅಂಗೀಕಾರ ಆಗಿಲ್ಲ. ಒಂದು ವೇಳೆ ಅಂಗೀಕಾರ ಆದ್ರೂ ಅದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.
ಕೃಷಿ ಕಾಯ್ದೆಗಳ ವಿರುದ್ಧ ವಿರೋಧ ವ್ಯಕ್ತವಾದ ಹಿನ್ನೆಲೆ ಕೇಂದ್ರ ಸರ್ಕಾರ ಕಾಯ್ದೆಗಳನ್ನ ವಾಪಸ್ಸ್ ಪಡೆಯಿತು.
ಅದೇ ಮಾದರಿಯಲ್ಲಿ ಮತಾಂತರ ಕಾಯ್ದೆ ವಿರುದ್ಧ ಹೋರಾಟ ಮಾಡ್ತೀವಿ ಎಂದು ತನ್ವೀರ್ ಸೇಠ್ ಮಾಹಿತಿ ನೀಡಿದರು.









