ಬೆಂಗಳೂರು : ಚೀಟಿ ಹೆಸರಿನಲ್ಲಿ ಜನರಿಗೆ ಕೋಟ್ಯಾಂತರ ರೂ. ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಪತ್ನಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿ(Bengaluru)ನ ಟಿ.ದಾಸರಹಳ್ಳಿಯಲ್ಲಿ ನಡೆದಿದೆ.
ತಮ್ಮ ಮನೆ ತೋರಿಸಿರುವ ಬಂಧಿತ ದಂಪತಿ, ಚೀಟಿ ಹಾಕಿಸಿಕೊಂಡಿದ್ದಾರೆ. ಪುಣ್ಯ ಹಾಗೂ ಚಂದ್ರಶೇಖರ್ ಎಂಬ ದಂಪತಿಗಳೇ ಈಗ ಅರೆಸ್ಟ್ ಆದವರು. ಈ ದಂಪತಿ ಸುಮಾರು 1.5 ಕೋಟಿಗೂ ಹೆಚ್ಚು ಹಣ ಚೀಟಿ ಹಾಕಿಸಿಕೊಂಡು ಹಲವರಿಗೆ ವಂಚಿಸಿದ್ದಾರೆ. ಈ ಕುರಿತು ದಂಪತಿ ವಿರುದ್ದ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.








