ದೆಹಲಿ – 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ
ದೆಹಲಿ : 6 ವರ್ಷದ ಬಾಲಕಿಯ ಮೇಲೆ ಕಾಮುಕನೋರ್ವ ಅತ್ಯಾಚಾರವೆಸಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ರಂಜಿತ್ ನಗರ ಪ್ರದೇಶದಲ್ಲಿ ನಡೆದಿದೆ. ಕಾಮುಕ ಬಾಲಕಿಯನ್ನ ಫಾಲೋ ಮಾಡ್ತಾಯಿದ್ದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಂತ್ರಸ್ತೆಗೆ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
ನಿನ್ನೆ ಬೆಳಿಗ್ಗೆ ಬಾಲಕಿ ನೆರೆಹೊರೆಯ ಲಂಗಾರ್ ನಲ್ಲಿ ತಿಂಡಿ ತಿನ್ನಲು ಹೋದಾಗ ಈ ಘಟನೆ ನಡೆದಿದೆ. ಬಾಲಕಿ ಮನೆಗೆ ಬಂದಾಗ ಆಕೆಗೆ ತೀವ್ರ ರಕ್ತಸ್ರಾವವಾಗುತ್ತಿದ್ದದ್ದನ್ನ ಗಮನಿಸಿದ ಪೋಷಕರು ತಕ್ಷಣವೇ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದ ನಂತರ ಆಕೆಯ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಗೊತ್ತಾಗಿದೆ. ಬಳಿಕ ಈ ಸಂಬಂಧ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಾಲಕಿಯ ತಂದೆ ದಿನಗೂಲಿ ಕಾರ್ಮಿಕರಾಗಿದ್ಧಾರೆ.
ಪ್ರೇಮ ವೈಫಲ್ಯ | ಜಿಮ್ ಟ್ರೈನರ್ ನೇಣಿಗೆ ಶರಣು
ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನ ಪೊಲೀಸರು ಪರಿಶೀಲಿಸಿದಾಗ ಆರೋಪಿ ಬಾಲಕಿಯನ್ನ ಫಾಲೋ ಮಾಡಿರುವುದು ಗಮನಕ್ಕೆ ಬಂದಿದೆ. ವೀಡಿಯೊದಲ್ಲಿ ಆತ ಹುಡುಗಿಯನ್ನ ಮಾರುಕಟ್ಟೆಯಿಂದ ಹಿಂಬಾಲಿಸುತ್ತಿರುವುದನ್ನು ಕಾಣಬಹುದು. ಆರೋಪಿಯನ್ನು ಇನ್ನೂ ವರೆಗೂ ಪತ್ತೆಹಚ್ಚಲಗಿಲ್ಲ. ಆದ್ರೆ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸ್ತಾಯಿದ್ದಾರೆ. ಈ ವಿಷಯದಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಮಹಿಳಾ ಆಯೋಗವು ಪೊಲೀಸರಿಗೆ ಸೂಚನೆ ನೀಡಿದೆ.