ಇಂದು ದೇಶಾದ್ಯಂತ ಸಂಭ್ರಾಚರಣೆ ಮನೆ ಮಾಡಿದೆ. ಯಾಕೆಂದರೆ ಇಂದು ಶತಕಗಳ ಹಿಂದೂಗಳ ಕನಸು ನನಸಾದ ಐತಿಹಾಸಿಕ ದಿನ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದ್ದು, ದೇಶದಲ್ಲಿ ಸಂತಸ ಮನೆ ಮಾಡಿದೆ. ಈ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮಾಡುವ ಮೂಲಕ ದೇಶದ ಜನತೆಗೆ ಶುಭಕೋರಿದ್ದಾರೆ.
“ದೇಶದ ಎಲ್ಲಾ ಪ್ರಜೆಗಳಿಗೂ ಅಭಿನಂದನೆಗಳು. ಶ್ರೀರಾಮನ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ. ಆ ದೇವರ ಕೃಪೆಯಿಂದ ದೇಶದಲ್ಲಿನ ಬಡತನ ಹಾಗೂ ಹಸಿವು ದೂರವಾಗಲಿ. ಭಾರತವು ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ರೂಪುಗೊಳ್ಳಲಿ. ಭವಿಷ್ಯದಲ್ಲಿ ಭಾರತವು ಇಡೀ ಜಗತ್ತಿಗೆ ದಾರಿ ದೀಪವಾಗಲಿ. ಜೈ ಶ್ರೀರಾಮ್, ಜೈ ಬಜರಂಗ ಬಲಿ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಸಿಂಗಾಪುರ ಘಟಕದ ಅಧ್ಯಕ್ಷರಾಗಿ ಶ್ರೀ ನಿತ್ಯಾನಂದ ಹೆಗ್ಡೆ ನೇಮಕ
ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಅಂಗವಾಗಿ ಸಿಂಗಾಪುರ ಘಟಕದ ಅಧ್ಯಕ್ಷರಾಗಿ...







