ಕೊರೊನಾದಿಂದ ಪೋಷಕರನ್ನ ಕಳೆದುಕೊಂಡ ಮಕ್ಕಳಿಗೆ 25 ವರ್ಷದವರೆಗೆ ಮಾಶಾಸನ, ಉಚಿತ ಶಿಕ್ಷಣ
ನವದೆಹಲಿ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಈ ನಡುವೆ ದೆಹಲಿಯಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿ ಮತ್ತೆ ಲಾಕ್ಡೌನ್ ವಿಸ್ತರಿಸಿದ್ದು, ಇದರ ಜೊತೆಗೆ ಸಂಕಷ್ಟದಲ್ಲಿರುವ ಜನತೆಗೆ ನೆರವಾಗಲು ನಾಲ್ಕು ಮಹತ್ವದ ಘೋಷಣೆ ಮಾಡಿದ್ದಾರೆ.
ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ 25 ವರ್ಷದವರೆಗೂ ಮಾಸಿಕ 2,500 ರೂ. ಮಾಶಾಸನ ನೀಡುವುದಾಗಿ ಪ್ರಕಟಿಸಿದ್ದಾರೆ. ಅಲ್ಲದೆ ಉಚಿತ ಶಿಕ್ಷಣ ಹಾಗೂ ಉಚಿತವಾಗಿ ಹತ್ತು ಕೆ.ಜಿ. ಪಡಿತರ ವಿತರಣೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಕೊರೊನಾಗೆ ಬಲಿಯಾದವರ ಪ್ರತಿ ಕುಟುಂಬಕ್ಕೆ 50 ಸಾವಿರ ರೂ. ಪರಿಹಾರ, ಕೊರೊನಾದಿಂದ ಪತಿ ಸತ್ತರೆ ಪತ್ನಿಗೆ ಪಿಂಚಣಿ, ಪತ್ನಿ ಸತ್ತರೆ ಪತಿಗೂ ಪಿಂಚಣಿ, ಅವಿವಾಹಿತ ವ್ಯಕ್ತಿ ಸತ್ತರೆ ಪೋಷಕರಿಗೆ ಪಿಂಚಣಿ ನೀಡುವುದಾಗಿ ಸಿಎಂ ಅರವಿಂದ ಕೇಜ್ರಿವಾಲ್ ಪ್ರಕಟಿಸಿದ್ದಾರೆ.
ನಮ್ಮ ರಾಜ್ಯದಲ್ಲಿ ಸಹ ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ರಕ್ಷಣೆಗೆ ಸರ್ಕಾರ ಧಾವಿಸಿದೆ. ಪ್ರತಿ ಜಿಲ್ಲೆಯಲ್ಲೂ ಸ್ವಯಂ ಸೇವಾ ಸಂಸ್ಥೆಗಳ ನೆರವಿನೊಂದಿಗೆ ದತ್ತು ಕೋವಿಡ್ ಕೇರ್ ಸ್ಥಾಪಿಸಲಾಗುವುದು. ಅನಾಥ ಮಕ್ಕಳನ್ನು ದತ್ತು ನಿಯಮಾವಳಿ ಪ್ರಕಾರ ದತ್ತು ನೀಡಲಾಗುವುದು. ಅಲ್ಲಿಯವರೆಗೂ ಮಕ್ಕಳ ಆರೈಕೆ, ಪೋಷಣೆ ಹೊಣೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಹಿಸಿಕೊಳ್ಳಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಕೋವಿಡ್ ಬಾಧಿತ ಮಕ್ಕಳಿಗಾಗಿ 0-6 ವರ್ಷ ವಯೋಮಾನದ ಮಕ್ಕಳಿಗಾಗಿ ಕ್ವಾರಂಟೈನ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಮಹಾಮಾರಿಯಿಂದಾಗಿ ಅನೇಕ ಮಕ್ಕಳು ತಂದೆ ತಾಯಿಯನ್ನ ಕಳೆದುಕೊಂಡು ಅನಾಥರಾಗಿದ್ರೆ , ಇನ್ನೂ ಹಲವರು ಕುಟುಂಬಸ್ಥರು , ಆಪ್ತರು , ಸ್ನೇಹಿತರನ್ನ ಕಳೆದುಕೊಂಡಿದ್ದಾರೆ.. ಮತ್ತು ಹಲವು ಕುಟುಂಬಗಳ ಆಧಾರಸ್ಥಂಬವೆನಿಸಿಕೊಂಡಿದ್ದರು ಕೊರೊನಾಗೆ ಬಲಿಯಾಗಿದ್ದು, ಕುಟುಂಬಗಳು ದಿಚ್ಚು ತೋಚದ ಪರಿಸ್ಥಿತಿಗೆ ತಲುಪಿವೆ.. ಸಿನಿಮಾ ತಾರೆಯರು ಮೃತಪಟ್ಟಿದ್ದಾರೆ. ಸೆಲೆಬ್ರಿಟಿಗಳು ಸಹ ತಮ್ಮವರನ್ನ ಕಳೆದುಕೊಂಡಿದ್ದಾರೆ.. ಇನ್ನೂ ವಿಪರ್ಯಾಸವೆಂದ್ರೆ ಮದುವೆಗೆ ಇನ್ನು ಒಂದೆರೆಡು ದಿನಗಳಿರುವಾಗಲೇ ವರ ಅಥವ ವಧು ಮೃತಪಟ್ಟಿರುವ ಘಟನೆಗಳು , ಮದುವೆಯಾದ ವಾರ -10 ದಿನಗಳೊಳಗೇ ಗಂಡ ಅಥವ ಹೆಂಡತಿ ಸಾವನಪ್ಪಿರುವುದು ಇಂತಹ ಮನಕಲುಕುವಂತಹ ಘಟನೆಗಳು ಬೆಳಕಿಗೆ ಬರುತ್ತಿವೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








