ದೆಹಲಿ ಹಿಂಸಾಚಾರ: ಸಮರ್ಪಕ ತನಿಖೆಗೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ..!
ನವದೆಹಲಿ: ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾತ್ಮಕ ರೂಪಕ್ಕೆ ತಿರುಗಿದ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಅಂಗಳಕ್ಕೆ ತಲುಪಿದೆ. ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗವನ್ನು ರಚಿಸಿ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ವಿಧ್ವಂಸಕ ಹಿಂಸಾಚಾರ ಕೃತ್ಯಗಳ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.
ಗಣರಾಜ್ಯೋತ್ಸವ ದಿನ ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೇಲೆ ಹತ್ತಿ ತ್ರಿವರ್ಣ ಧ್ವಜಕ್ಕೆ ಅಗೌರವ ತೋರಿಸಿ ಸಿಖ್ಖರ ಧಾರ್ಮಿಕ ಧ್ವಜವನ್ನು ಹಾರಿಸಿದ್ದು ಮತ್ತು ರಾಜಧಾನಿಯಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣಕರ್ತರಾದ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಸಂಬಂಧಪಟ್ಟ ಕಾನೂನು ಸಾಧ್ಯತೆಗಳ ಅಡಿಯಲ್ಲಿ FIR ದಾಖಲಿಸುವಂತೆ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಸೂಚಿಸಬೇಕೆಂದು ಸಹ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.
ಮಹಿಳಾ ಪೊಲೀಸರಿಗೆ ಇಲ್ಲಾ ಸೇಫ್ಟಿ…! ಪೊಲೀಸ್ ಅಕಾಡೆಮಿ ಶಿಕ್ಷಕನಿಂದಲೇ ರೇಪ್ : ಸಂತ್ರಸ್ತೆ ಆತ್ಮಹತ್ಯೆ
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಲು ತಮ್ಮ ಪ್ರತಿಭಟನೆಯ ವಿಧಾನವನ್ನು ತೀವ್ರಗೊಳಿಸಲು ರೈತರು ಗಣರಾಜ್ಯೋತ್ಸವ ದಿನ ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದರು. ಆದರೆ ರ್ಯಾಲಿಯ ಗುಂಪೊಂದು ಅವಧಿಗೆ ಮುನ್ನವೇ ರ್ಯಾಲಿ ಆರಂಭಿಸಿ ಪೊಲೀಸ್ ಬ್ಯಾರಿಕೇಡ್ ಮುಗಿದು ರಾಜಧಾನಿಯೊಳಗೆ ನುಗ್ಗಿದ್ದರಿಂದ ಪೊಲೀಸರು ಜಲಫಿರಂಗಿ, ಲಾಠಿಚಾರ್ಜ್ ನಡೆಸಿ ರಣರಂಗವಾಗಿ ಮಾರ್ಪಟ್ಟಿತು. ಸಾರ್ವಜನಿಕ ಆಸ್ತಿಪಾಸ್ತಿಗಳು ಕೂಡ ಹಾನಿಯಾಗಿವೆ. ದೆಹಲಿ ಪೊಲೀಸರು ಇದುವರೆಗೆ ಘಟನೆಗೆ ಸಂಬಂಧಪಟ್ಟಂತೆ 22 FIR ಗಳನ್ನು ದಾಖಲಿಸಿದ್ದು 300ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯುವಕನಿಗೆ ಥಳಿಸಿ, ಚಿತ್ರಹಿಂಸೆಕೊಟ್ಟು ಬೆಟ್ಟದ ಮೇಲಿಂದ ತಳ್ಳಿದ ಯುವತಿ ಕುಟುಂಬಸ್ಥರು…!
ಇಂದು ಸುಪ್ರೀಂ ಕೋರ್ಟ್ ನಲ್ಲಿ ಅಡ್ವೊಕೇಟ್ ವಿಶಾಲ್ ತಿವಾರಿ ಎಂಬುವವರು ಅರ್ಜಿ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್ ನ ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ಮೂವರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಬೇಕು, ಅಲ್ಲದೆ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಮತ್ತು ಸಾಕ್ಷಿಗಳನ್ನು ಸಂಗ್ರಹಿಸಿ ಕಾಲಮಿತಿಯಲ್ಲಿ ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಲು ಹೇಳಬೇಕು ಎಂದು ಒತ್ತಾಯಿಸಿದ್ದಾರೆ.
ಚರ್ಮಕ್ಕೆ ಚರ್ಮ ಸ್ಪರ್ಶವಾಗದೇ ಇದ್ರೆ ಅದು ಲೈಂಗಿಕ ದೌರ್ಜನ್ಯವಲ್ಲ ಎಂದಿದ್ದ ಹೈಕೋರ್ಟ್ : ತೀರ್ಪಿಗೆ ತಡೆ ನೀಡಿದ ‘ಸುಪ್ರೀಂ’
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








