ADVERTISEMENT
Tuesday, October 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

2020ರ  ದೆಹಲಿ ಗಲಭೆ ಪ್ರಕರಣ : ತನಿಖೆ ವಿಫಲ – ದೆಹಲಿ ಪೊಲೀಸರಿಗೆ ದಂಡ

Namratha Rao by Namratha Rao
July 15, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

2020ರ  ದೆಹಲಿ ಗಲಭೆ ಪ್ರಕರಣ : ತನಿಖೆ ವಿಫಲ – ದೆಹಲಿ ಪೊಲೀಸರಿಗೆ ದಂಡ

ನವದೆಹಲಿ: ಫೆಬ್ರವರಿ 2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಲ್ಲಿ ದೆಹಲಿ ಪೊಲೀಸರು ದಯನೀಯವಾಗಿ ವಿಫ‌ಲರಾಗಿದ್ದಾರೆ ಎಂದು ಉಲ್ಲೇಖೀಸಿರುವ ನ್ಯಾಯಾಲಯವು, ಪೊಲೀಸರಿಗೆ 25 ಸಾವಿರ ರೂ. ದಂಡ ವಿಧಿಸಿದೆ.

Related posts

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

October 6, 2026
ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

October 6, 2026

ಈಶಾನ್ಯ ದೆಹಲಿಯಲ್ಲಿ ಫೆಬ್ರವರಿ 2020ರಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ  ಹಲಿ ಪೊಲೀಸರು ಸಲ್ಲಿಸಿದ ಮರುಪರಿಶೀಲನಾ ಅರ್ಜಿಯ ವಿಚಾರಣೆ ವೇಳೆ ಕೋರ್ಟ್‌ ಈ ದಂಡ ವಿಧಿಸಿದೆ.

ಪ್ರಕರಣವೊಂದನ್ನು ತಪ್ಪಾಗಿ ನಿರ್ವಹಿಸಿದ್ದಕ್ಕಾಗಿ ದೆಹಲಿ ಪೊಲೀಸರಿಗೆ ಸ್ಥಳೀಯ ನ್ಯಾಯಾಲಯವು 25 ಸಾವಿರ ದಂಡ ವಿಧಿಸಿದೆ ಹಾಗೂ ಪೊಲೀಸರ ಕ್ರಮವನ್ನು ಕೋರ್ಟ್ ತೀವ್ರವಾಗಿ ಖಂಡಿಸಿದೆ. ಗಲಭೆಯಲ್ಲಿ ಹಲ್ಲೆಗೆ ಒಳಗಾದ ಮೊಹಮ್ಮದ್ ನಾಸಿರ್ ದೆಹಲಿ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳಲು ನ್ಯಾಯಾಲಯದ ಮೊರೆ ಹೋಗಬಹುದು ಎಂದು ಕೂಡಾ ಹೇಳಿದೆ.

ಗಲಭೆಯ ಸಂದರ್ಭದಲ್ಲಿ ಕಣ್ಣಿಗೆ ಗುಂಡು ಬಿದ್ದಿದ್ದ ಮೊಹಮ್ಮದ್ ನಾಸಿರ್, ತನ್ನ ಪ್ರದೇಶದ ಆರು ಜನರ ವಿರುದ್ಧ ದೂರು ನೀಡಿದ್ದು, ಪ್ರತಿಯೊಬ್ಬರ ಹೆಸರನ್ನು ಉಲ್ಲೇಖ ಮಾಡಿದ್ದನು. ಈ ಪ್ರಕರಣದ ಆರೋಪಿಗಳಲ್ಲಿ ಓರ್ವ ಬಿಜೆಪಿ ಮಾಜಿ ಶಾಸಕ ನರೇಶ್ ಗೌರ್ ಆಗಿದ್ದಾರೆ.

ಸಂಪೂರ್ಣವಾಗಿ ಸಂಬಂಧವಿಲ್ಲದ ಪ್ರಕರಣವೊಂದಕ್ಕೆ ಪೊಲೀಸರು ಆತನ ದೂರನ್ನು ಹೋಲಿಕೆ ಮಾಡಲು ಯತ್ನಿಸಿದಾಗ ಮೊಹಮ್ಮದ್ ನಾಸಿರ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್‌ರನ್ನು ಸಂಪರ್ಕಿಸಿದ್ದಾನೆ. ಕೆಳ ನ್ಯಾಯಾಲಯವು ಅರ್ಜಿಯನ್ನು ಎತ್ತಿಹಿಡಿದಿದ್ದು, ಈ ಪ್ರಕರಣದಲ್ಲಿ ಪೊಲೀಸರು ಎಫ್‌ಐಆರ್‌ ವರದಿಯನ್ನು ಸಲ್ಲಿಸುವಂತೆ ಒತ್ತಾಯಿಸಿದೆ. ಆದರೆ ಪೊಲೀಸರು ಸೆಷನ್ಸ್ ನ್ಯಾಯಾಲಯದಲ್ಲಿ ಆದೇಶವನ್ನು ಪ್ರಶ್ನಿಸಿದರು.

ಯುದ್ಧ ಪೀಡಿತ ಅಫ್ಘಾನ್‌ನಲ್ಲಿ ಹೆಚ್ಚಾದ ಮಾನವೀಯ ಬಿಕ್ಕಟ್ಟು – ವಿಶ್ವಸಂಸ್ಥೆ ಕಳವಳ

ದೆಹಲಿಯ  ನ್ಯಾಯಾಲಯವೊಂದು ನೀಡಿದ ಆದೇಶವನ್ನು ಪ್ರಶ್ನಿಸಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿರುವ ದಿಲ್ಲಿ ಪೊಲೀಸರ ಕ್ರಮವನ್ನು ಆಕ್ಷೇಪಿಸಿರುವ ನ್ಯಾಯಾಲಯ, ಪೊಲೀಸರು ಆರೋಪಿಗಳಿಗೆ ಸಮರ್ಥನೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಹಾಗೂ ತಮ್ಮ ಶಾಸನಬದ್ಧ ಕರ್ತವ್ಯಗಳನ್ನುನಿಭಾಯಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಟೀಕಿಸಿದೆ.

ಭಜನಪುರ ಪೊಲೀಸ್ ಠಾಣಾಧಿಕಾರಿ ಹಾಗೂ ಇತರ ಅಧಿಕಾರಿಗಳ ಮೇಲೆ ಈ ಸಂಬಂಧ ರೂ. 25,000 ದಂಡ ಹೇರಿದ ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶ ವಿನೋದ್ ಯಾದವ್, ತಮ್ಮ ಆದೇಶದ ಪ್ರತಿಯನ್ನು ಪೊಲೀಸ್ ಆಯುಕ್ತರಿಗೂ ಸಲ್ಲಿಸಿ ಈ ನಿರ್ದಿಷ್ಟ ಪ್ರಕರಣದಲ್ಲಿ ತನಿಖೆಯ ಕುರಿತಂತೆ ಅವರ ಗಮನ ಸೆಳೆದರಲ್ಲದೆ ಸೂಕ್ತ ಕ್ರಮಕ್ಕೂ ಸೂಚಿಸಿದ್ದಾರೆ. ಮೊಹಮ್ಮದ್ ನಾಸಿರ್ ಎಂಬಾತನ ದೂರಿನ ಆಧಾರದಲ್ಲಿ ದಿಲ್ಲಿ ಪೊಲೀಸರಿಗೆ 24 ಗಂಟೆಗಳೊಳಗೆ ಎಫ್‍ಐಆರ್ ದಾಖಲಿಸುವಂತೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅವರು ಅಕ್ಟೋಬರ್ 2020ರಲ್ಲಿ ಸೂಚಿಸಿದ್ದರು.

ಆತ ತನ್ನ ದೂರಿನಲ್ಲಿ ಹಲವು ಮಂದಿಯ ಹೆಸರುಗಳನ್ನು ಉಲ್ಲೇಖಿಸಿದ್ದರು. ಆದರೆ ಪೊಲೀಸರು ಎಫ್‍ಐಆರ್ ದಾಖಲಿಸಲು ಕ್ರಮ ಕೈಗೊಳ್ಳದೇ ಇದ್ದುದರಿಂದ ಕೋರ್ಟಿನ ಮೊರೆ ಹೋಗಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸರು ಘಟನೆ ಸಂಬಂಧ ಈಗಾಗಲೇ ಎಫ್‍ಐಆರ್ ದಾಖಲಾಗಿದೆ ಆದರೆ ನಾಸಿರ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ ವ್ಯಕ್ತಿಗಳ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಹೇಳಿದ್ದರು.

Tags: 2020dehli policedehli voilence
ShareTweetSendShare
Join us on:

Related Posts

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

by Shwetha
October 6, 2026
0

ನವದೆಹಲಿ: ದೇಶದ ರಾಜಕಾರಣದಲ್ಲಿ ಈಗ ಬದಲಾವಣೆಯ ಗಾಳಿ ಬೀಸುತ್ತಿದೆ ಮತ್ತು ಬಿಜೆಪಿಯ ಅಧಿಪತ್ಯ ಕುಸಿಯುವ ಕಾಲ ಹತ್ತಿರ ಬಂದಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಅವರು ಗುಡುಗಿದ್ದಾರೆ....

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

by Shwetha
October 6, 2026
0

ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್‌ (UPI) ಮೂಲಕ ನಡೆಯುವ ವ್ಯಕ್ತಿಯಿಂದ ವ್ಯಾಪಾರಿಗೆ (P2M) ವಹಿವಾಟುಗಳಿಗೆ ಅಕ್ಟೋಬರ್ 15, 2026ರಿಂದ ಹೊಸ ಮರ್ಚೆಂಟ್ ಡಿಸ್ಕೌಂಟ್ ರೇಟ್‌ (MDR) ಜಾರಿಗೆ ಬರಲಿದೆ....

ಪ್ರದೀಪ್ ಈಶ್ವರ್ ವಿಚಾರ ಮಾತಾಡೋ ಮೊದಲು ವಿಜಯೇಂದ್ರ ಯತ್ನಾಳ್ ಕಾಳಗ ನೋಡಿ: ಕೈ ಪಾಳಯದ ಒಳಜಗಳಕ್ಕಿಂತ ಕಮಲ ಪಡೆಯ ಬಣ ರಾಜಕೀಯವೇ ದೊಡ್ಡದು ಎಂದ ಬಿ ಕೆ ಹರಿಪ್ರಸಾದ್

ಪ್ರದೀಪ್ ಈಶ್ವರ್ ವಿಚಾರ ಮಾತಾಡೋ ಮೊದಲು ವಿಜಯೇಂದ್ರ ಯತ್ನಾಳ್ ಕಾಳಗ ನೋಡಿ: ಕೈ ಪಾಳಯದ ಒಳಜಗಳಕ್ಕಿಂತ ಕಮಲ ಪಡೆಯ ಬಣ ರಾಜಕೀಯವೇ ದೊಡ್ಡದು ಎಂದ ಬಿ ಕೆ ಹರಿಪ್ರಸಾದ್

by Shwetha
October 6, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮಾಜಿ ಸಚಿವ ಎಂ ಸಿ ಸುಧಾಕರ್ ಮತ್ತು ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ತಾರಕಕ್ಕೇರಿರುವ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಬಿ...

ನೈಸ್‌ ಸಂಸ್ಥೆಗೆ ಸುಪ್ರೀಂನಲ್ಲಿ ಹಿನ್ನಡೆ: ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ಇಲ್ಲ

ನೈಸ್‌ ಸಂಸ್ಥೆಗೆ ಸುಪ್ರೀಂನಲ್ಲಿ ಹಿನ್ನಡೆ: ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ಇಲ್ಲ

by Shwetha
October 6, 2026
0

Lಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್‌ (BMIC) ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ನೈಸ್‌ (NICE) ಸಂಸ್ಥೆಗೆ ಸುಪ್ರೀಂಕೋರ್ಟ್‌ನಲ್ಲಿ ಮಧ್ಯಂತರ ಹಿನ್ನಡೆಯಾಗಿದೆ. ಕರ್ನಾಟಕ ಹೈಕೋರ್ಟ್‌ ನೀಡಿರುವ ಮಹತ್ವದ ಆದೇಶಕ್ಕೆ ತಕ್ಷಣದ ಮಧ್ಯಂತರ...

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

by Shwetha
October 6, 2026
0

ಮೈಸೂರು: ತಮ್ಮ ರಾಜಕೀಯ ಜೀವನದ ಏರಿಳಿತಗಳಿಗೆ ಸಾಕ್ಷಿಯಾದ ವರುಣ ಕ್ಷೇತ್ರದ ದಾಸನೂರು ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ಭಾವುಕರಾಗಿ ಮಾತನಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram