ಬಿಜೆಪಿ ನಾಯಕ ಆರ್. ಆಶೋಕ್ ಅವರು ತಮ್ಮ ಟ್ವೀಟ್ನಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ ₹4,482 ಕೋಟಿ ಬಾಕಿ ಉಳಿಸಿಕೊಂಡಿರುವುದನ್ನು ಉಲ್ಲೇಖಿಸಿದ್ದಾರೆ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ವಿಷಯದಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಪರಿಸ್ಥಿತಿ ಎದುರಾಗಿರುವುದರಿಂದ ರೈತರು ಅನಾಥರಾಗಿದ್ದಾರೆ.
ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ ಇದ್ದರೂ ಸಹ, ನಿಯಮವನ್ನ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರುತ್ತಿಲ್ಲ.
ಸಿಎಂ @siddaramaiah ನವರೇ, ನಾಡಿನ ರೈತರ ಬದುಕು ಸುಭದ್ರ ಪಡಿಸಬೇಕಾದ ತಾವು
ನಿಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವುದರಲ್ಲೇ ಕಾಲ ಕಳೆದರೆ, ನಾಡಿನ ರೈತರ ಕಷ್ಟಕ್ಕೆ ಸ್ಪಂದಿಸುವವರು ಯಾರು? ನಿಮ್ಮ ಸರ್ಕಾರ ಸತ್ತಿದೆಯೋ ಅಥವಾ ಬದುಕಿದೆಯೋ?
ಈ ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡುವಂತೆ ಸಕರೆ ಕಾರ್ಖಾನೆಗಳಿಗೆ ಸೂಚನೆ ನೀಡಿ ರೈತರ ನೆರವಿಗೆ ಬನ್ನಿ ಎಂದು ಆರ್. ಆಶೋಕ್ ಟ್ವೀಟ್ ಮಾಡಿದ್ದಾರೆ.