ರಸ್ತೆಯಲ್ಲಿ ಹೋಗುತ್ತಿದ್ದ ಶಾಲಾ ಬಾಲಕಿ ಮೇಲೆ ಆಸಿಡ್ ಅಟ್ಯಾಕ್…
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ 17 ವರ್ಷದ ಶಾಲಾ ಬಾಲಕಿಯ ಮೇಲೆ ಕಿಡಿಗೇಡಿಗಳು ಆಸಿಡ್ ಎರಚಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ದ್ವಾರಕಾದಲ್ಲಿ ನಡೆದಿದೆ.
ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಾಲಕಿಯು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಇಬ್ಬರು ಕಿಡಿಗೇಡಿಗಳು ಬೈಕ್ ನಲ್ಲಿ ಬಂದಿದ್ದು , ಅದ್ರಲ್ಲಿ ಹಿಂಬದಿ ಸವಾರ ಬಾಲಕಿಯ ಮುಖದ ಮೇಳೆ ಆ್ಯಸಿಡ್ ಎರಚಿದ್ದಾನೆ. ನಂತರ ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ತೀವ್ರ ಗಾಯಗೊಂಡ ಆ್ಯಸಿಡ್ ಸಂತ್ರಸ್ತೆಯನ್ನು ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ಮತ್ತು ಡಿಸಿಪಿ ದ್ವಾರಕಾ ಆಸ್ಪತ್ರೆಗೆ ಹೋಗಿದ್ದಾರೆ. ಮೂಲಗಳ ಪ್ರಕಾರ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗ್ತಿದೆ.
Delhi Acid attack on a school girl who was going on the road








