ನವದೆಹಲಿ : 13ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ಐಪಿಎಲ್ ಟ್ರೋಫಿಯನ್ನು ಡೆಲ್ಲಿ ಕ್ಯಾಪಿಟಲ್ ತಂಡ ಗೆಲ್ಲಲಿದೆ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್ ಭವಿಷ್ಯ ನುಡಿದಿದ್ದಾರೆ.
ಈ ಬಗ್ಗೆ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ಕೆವಿನ್ ಪೀಟರ್ಸನ್, ಇಂಗ್ಲೆಂಡ್ ಬಬಲ್ ನಿಂದ ದುಬೈಗೆ … ನಾವು ಮತ್ತೆ ಕ್ರಿಕೆಟ್ ಗೆ ಮರಳಿರುವುದಕ್ಕೆ ಸಂತೋಷವಾಗುತ್ತಿದೆ. ಐಪಿಎಲ್ 2020ಯಲ್ಲಿ ಕೆಲಸ ಮಾಡುವುದಕ್ಕೆ ಅತ್ಯಂತ ಖುಷಿಪಡುತ್ತೇನೆ ಎಂದಿರುವ ಅವರು ಈ ಬಾರಿ ಯಾರು ಗೆಲ್ಲುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಹಾಗೆ ನನಗೆ ಡೆಲ್ಲಿ ಕ್ಯಾಪಿಟಲ್ ಗೆಲ್ಲುವ ವಿಶ್ವಾಸವಿದೆ ಎಂದು ಬರೆದುಕೊಂಡಿದ್ದಾರೆ.
ಕೆವಿನ್ ಪೀಟರ್ ಸನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಡೇರ್ ಡೇವಿಲ್ಸ್ ಹಾಗೂ ಪುಣೆ ವಾರಿಯರ್ಸ್ ಪರ ಐಪಿಎಲ್ ನಲ್ಲಿ ಆಡಿದ್ದರು.
ಇನ್ನು ಯುವಕರನ್ನೇ ಒಳಗೊಂಡಿರುವ ಡೆಲ್ಲಿ ಕ್ಯಾಪಿಟಲ್ ತಂಡವನ್ನು ಯುವ ಆಟಗಾರ ಶ್ರೇಯಸ್ ಅಯ್ಯರ್ ಮುನ್ನಡೆಸುತ್ತಿದ್ದಾರೆ. ಅಯ್ಯರ್ ನಾಯಕತ್ವದಲ್ಲಿ ಡೆಲ್ಲಿ ಕಳೆದ ಬಾರಿ ಪ್ಲೇಆಫ್ ಹಂತಕ್ಕೆ ತಲುಪಿತ್ತು. ಈ ಬಾರಿ ಯುವಕರ ತಂಡಕ್ಕೆ ಅನುಭವಿ ಆಟಗಾರರಾದ ರಹಾನೆ, ಅಶ್ವಿನ್ ರಂತಹ ಅನುಭವಿಗಳು ಸೇರ್ಪಡೆಗೊಂಡಿರುವು ಮತ್ತಷ್ಟು ಬಲ ತಂದಿದೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.
https://www.youtube.com/watch?v=_st-YDZlTCE