ನವದೆಹಲಿ: ಚುನಾವಣೆಯ ಹಿನ್ನೆಲೆಯಲ್ಲಿ ಜಾಮೀನಿನ ಮೇಲೆ ಹೊರ ಬಂದಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ಮತ್ತೆ ತಿಹಾರ್ ಜೈಲು ಸೇರಲಿದ್ದಾರೆ.
ಲೋಕಸಭಾ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ಪಡೆದು ಹೊರ ಬಂದಿದ್ದರು. ಜಾಮೀನಿನ ಅವಧಿ ಮುಗಿದ ಹಿನ್ನೆಲೆಯಲ್ಲಿ ಮತ್ತೆ ಜೈಲು ಸೇರಲಿದ್ದಾರೆ. ಇಂದು ಮಧ್ಯಾಹ್ನ ಕೇಜ್ರಿವಾಲ್ ಜೈಲು ಸೇರಲಿದ್ದಾರೆ.
ಅಲ್ಲದೇ, ಜಾಮೀನು ವಿಸ್ತರಣೆ ಕೋರಿ ಸುಪ್ರೀಂ ಕೋರ್ಟ್‌ಗೆ ಕೇಜ್ರಿವಾಲ್ ಇತ್ತೀಚೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು.