ನವದೆಹಲಿ: ನಿನ್ನೆ ಸಂಜೆ ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಬಾಂಬ್ ಸ್ಫೋಟ ನಡೆದ ಹಿನ್ನೆಲೆಯಲ್ಲಿ ದೇಶಾದ್ಯಂತ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ.
ಪ್ರಮುಖವಾಗಿ ಏರ್‍ಪೋರ್ಟ್‍ಗಳು, ರಾಯಭಾರ ಕಚೇರಿಗಳು, ಸರ್ಕಾರಿ ಕಚೇರಿಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗಿದೆ. ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಸಂಸತ್ ಭವನ ಆವರಣದಲ್ಲಿ ಬೀಟಿಂಗ್ ರಿಟ್ರೀಟ್ ಕಾರ್ಯಕ್ರಮ ನಡೆಯುತ್ತಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗವಹಿಸಿದ್ದರು. ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಿಂದ 2 ಕ.ಮೀ ದೂರದಲ್ಲಿ ಬಿಗಿ ಭದ್ರತೆ ಹೊಂದಿರುವ ಪ್ರದೇಶದಲ್ಲಿ ಬಾಂಬ್ ಸ್ಫೋಟ ನಡೆಸಿರುವ ಹಿನ್ನೆಲೆಯಲ್ಲಿ ಹೈ ಅಲರ್ಟ್‍ಗೆ ಸೂಸಿಲಾಗಿದೆ.
ದೆಹಲಿ ಸ್ಫೋಟದ ಹಿನ್ನೆಲೆಯಲ್ಲಿ ಉತ್ತರ ಭಾರತದ ಪ್ರಸಿದ್ಧ ಮಹಾಕುಂಭ ಮೇಳಕ್ಕೆ ಭದ್ರತೆಯನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ. ಹರಿದ್ವಾರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅಯೋಧ್ಯೆ ಸೇರಿದಂತೆ ಉತ್ತರ ಪ್ರದೇಶದ ಹಲವೆಡೆ ಬಿಗಿ ಭದ್ರತೆ ನೀಡಲು ನಿರ್ಧರಿಸಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel