ದೆಹಲಿ: ಅಬಕಾರಿ ನೀತಿಯಲ್ಲಿ ಅವ್ಯವಹಾರ ಆರೋಪ ಎದುರಿಸುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಜಾಮೀನನ್ನು ಹೈಕೋರ್ಟ್ ತಡೆ ಹಿಡಿದಿದೆ. ಹೀಗಾಗಿ ಕೇಜ್ರಿವಾಲ್ ಜಾಮೀನು ಕೋರಿ ಸುಪ್ರೀಂಕೋರ್ಟ್ (Supreme Court) ಮೊರೆ ಹೋಗಿದ್ದಾರೆ.
ಇತ್ತೀಚೆಗೆ ರೋಸ್ ಅವೆನ್ಯೂ ನ್ಯಾಯಾಲಯ ಕೇಜ್ರಿವಾಲ್ ಗೆ ಜಾಮೀನು ನೀಡಿತ್ತು. ಆದರೆ ರೋಸ್ ಅವೆನ್ಯೂ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿತ್ತು. ಹೀಗಾಗಿ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಕೇಜ್ರಿವಾಲ್ ಪರ ವಕೀಲರು ಸೋಮವಾರ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಿಂದೆ ದೆಹಲಿ ನ್ಯಾಯಾಲಯದಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಗೆ ಜಾಮೀನು ನೀಡಲಾಗಿತ್ತು. ಆದರೆ ಅವರ ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತನ್ನ ಆದೇಶ ನೀಡುವವರೆಗೆ ಜಾಮೀನಿಗೆ ತಡೆ ನೀಡಿತ್ತು.
ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶ ನ್ಯಾಯ್ ಬಿಂದು ಅವರು ಗುರುವಾರ ಕೇಜ್ರಿವಾಲ್ಗೆ 1 ಲಕ್ಷ ರೂ. ಜಾಮೀನು ಬಾಂಡ್ ಅನ್ನು ಒದಗಿಸಿ ಜಾಮೀನು ನೀಡಿದ್ದರು. ಮುಂದೂಡುವಂತೆ ಇಡಿ ಮನವಿ ಸಲ್ಲಿಸಿತ್ತು.